(www.vknews.in) ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ದಿನಾಂಕ: 04-12-2022ನೇ ಭಾನುವಾರದಂದು ಪಣಂಬೂರು ಘಟಕದ ವತಿಯಿಂದ ಸ್ವಚ್ಛತಾ ಅಭಿಯಾನವನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ{{ ಮುರಲೀಮೋಹನ್ ಚೂಂತಾರು ಅವರು ಮಾತನಾಡಿ, ನಮ್ಮ ಸುತ್ತಲಿನ ಪರಿಸರವನ್ನು ನಾವು ಸ್ವಚ್ಛವಾಗಿಟ್ಟುಕೊಂಡರೆ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಬಹುದು. ಸ್ವಚ್ಛ ಸುಂದರ ಪರಿಸರದಿಂದ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಮಾಡಲು ಸಾಧ್ಯವಿದೆ . ಪರಿಸರವನ್ನು ಪ್ಲಾಸ್ಟಿಕ್ ಮತ್ತು ಇತರೆ ತ್ಯಾಜ್ಯವಸ್ತುಗಳಿಂದ ಮಲಿನಗೊಳಿಸುವಲ್ಲಿ ಜೈವಿಕ ಸರಪಳಿ ಕಳಚಿಕೊಂಡು ಪರಿಸರದಲ್ಲಿ ಅಸಮತೋಲನ ಉಂಟಾಗಿ ಹತ್ತು ಹಲವು ಸಮಸ್ಯೆಗಳಿಗೆ ಕಾರಣವಾಗುತ್ತದೆ. ಈ ನಿಟ್ಟಿನಲ್ಲಿ ಗೃಹರಕ್ಷಕರಿಗೆ ಪರಿಸರ ನೈರ್ಮಲ್ಯ ಕಾಪಾಡಿಕೊಳ್ಳುವಲ್ಲಿ ಹೆಚ್ಚಿನ ಸಾಮಾಜಿಕ ಹೊಣೆಗಾರಿಕೆ ಇದೆ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಪಣಂಬೂರು ಘಟಕದ ಹಿರಿಯ ಗೃಹರಕ್ಷಕರಾದ ಶ್ರೀ ಜಗದೀಶ್, ಪ್ರಶಾಂತ್, ರಾಕೇಶ್, ದಿನೇಶ್, ಮಹೇಶ್, ಪ್ರಕಾಶ್, ಮಂಜುನಾಥ, ಹರಿಶ್ಚಂದ್ರ, ಪ್ರತಾಪ್, ಜೆನಿಫರ್, ಬೇಬಿ ಮತ್ತು ಪ್ರೇಮ ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.