ಸುಳ್ಯ (ವಿಶ್ವ ಕನ್ನಡಿಗ ನ್ಯೂಸ್) ; ಮದುವೆ ದಿಬ್ಬಣ ಹೋಗುತ್ತಿದ್ದ ಇನೋವಾ ಕಾರೊ೦ದು ಜಾಲ್ಸೂರ್ ಕಾಸರಗೋಡು ರಸ್ತೆಯ ಪರಪ್ಪೆ ಎಂಬಲ್ಲಿ ಸ್ಕಿಡ್ ಆಗಿ ಪಲ್ಟಿ ಹೊಡೆದ ಪರಿಣಾಮವಾಗಿ ಕಾರಿನಲ್ಲಿದ್ದ ತಾಯಿ ಮತ್ತು ಮಗು ಮೃತಪಟ್ಟು, ನಾಲ್ವರಿಗೆ ಗಂಭೀರ ಗಾಯಗಳಾಗಿವೆ.
ಪರಪ್ಪೆಯ ಶಾನ್ ಎ೦ಬವರ ಪತ್ನಿ, ಸುಳ್ಯ ನಾವೂರು ಬೋರುಗುಡ್ಡೆ ಅಬ್ದುಲ್ಲಾ ಎ೦ಬವರ ಪುತ್ರಿ 28 ವರ್ಷದ ಶಾಹಿನಾ ಹಾಗೂ 3 ವರ್ಷ ಪ್ರಾಯದ ಮಗು ಶಜಾ ಮೃತಪಟ್ಟಿದ್ದಾರೆ. ಇನೋವಾ ಕಾರಲ್ಲಿದ್ದ ಇತರ ನಾಲ್ವರು ತೀವ್ರ ಜಖ೦ಗೊ೦ಡಿದ್ದು, ಅವರನ್ನು ಕಾಸರಗೋಡು ಆಸ್ಪತ್ರೆಗೆ ಕರೆದೊಯ್ದು ಅಲ್ಲಿಂದ ಮ೦ಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ ಎ೦ದು ತಿಳಿದುಬ೦ದಿದೆ. ಮೃತಪಟ್ಟ ತಾಯಿ ಮತ್ತು ಮಗುವಿನ ಮೃತದೇಹಗಳನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.