(www.vknews.in) ಬಾವಿಹಳ್ಳಿ (ತಾ. ಹೂವಿನಹಡಗಲಿ) :ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಬಾವಿಹಳ್ಳಿ ಗ್ರಾಮದ ಹಿರಿಯ ಸಾಮಾಜಿಕ ಕಾರ್ಯಕರ್ತ, ವೀರಶೈವ ಸಮಾಜದ ಮುಖಂಡ, ನಿವೃತ್ತ ಗ್ರಾಮಲೆಕ್ಕಾಧಿಕಾರಿ ಪಂಚಾಕ್ಷರಯ್ಯ ರೇವಣಸಿದ್ಧಯ್ಯ ಹಿರೇಮಠ (83) ಗುರುವಾರ ನಿಧನ ಹೊಂದಿದರು. ವಿಶೇಷವಾಗಿ ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರಗಳ ಚಟುವಟಿಕೆಗಳಲ್ಲಿ ಸಕ್ರೀಯರಾಗಿ ಸುಮಾರು 5 ದಶಕಗಳ ಕಾಲ ಸುದೀರ್ಘ ಸೇವೆಗೈದಿದ್ದ ಪಂಚಾಕ್ಷರಯ್ಯ ಹಿರೇಮಠ ಅವರು ವೀರಶೈವ ಧರ್ಮದ ವಿವಿಧ ಮಠ-ಪೀಠಗಳ ಗೌರವಗಳಿಗೆ ಭಾಜನರಾಗಿದ್ದರು.
ವ್ಯಾಪಕ ಶೋಕ :ಬಾಳೆಹೊನ್ನೂರಿನ ರಂಭಾಪುರಿ ಪೀಠದ ಶ್ರೀಜಗದ್ಗುರು ಡಾ. ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು, ಉಜ್ಜಯಿನಿ ಸದ್ಧರ್ಮ ಪೀಠದ ಶ್ರೀಜಗದ್ಗುರು ಸಿದ್ಧಲಿಂಗ ದೇಶೀಕೇಂದ್ರ ಶಿವಾಚಾರ್ಯ ಭಗವತ್ಪಾದರು, ಧಾರವಾಡ ಜಿಲ್ಲೆ ಅಮ್ಮಿನಬಾವಿ ಪಂಚಗೃಹ ಹಿರೇಮಠದ ಹಿರಿಯ ಶ್ರೀಗಳಾದ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ಕಿರಿಯ ಶ್ರೀಗಳಾದ ಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ಹಂಪಸಾಗರ ನವಲಿಹಿರೇಮಠದ ಶ್ರೀಶಿವಲಿಂಗ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಹರಪನಹಳ್ಳಿ ತೆಗ್ಗಿನಮಠದ ಶ್ರೀವರ ಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿ, ರಾಮಘಟ್ಟ ರಂಭಾಪುರಿ ಶಾಖಾಮಠದ ಶ್ರೀರೇವಣಸಿದ್ಧ ಶಿವಾಚಾರ್ಯ ಸ್ವಾಮೀಜಿ, ಮರಿಯಮ್ಮನಹಳ್ಳಿ ಶ್ರೀಶೈಲ ಶಾಖಾಮಠದ ಶ್ರೀಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ಮಾನ್ವಿಹಳ್ಳಿ ಪುರವರ್ಗ ಹಿರೇಮಠದ ಡಾ. ಮಳೆಯೋಗೀಶ್ವರ ಶಿವಾಚಾರ್ಯ ಸ್ವಾಮೀಜಿ, ಅಳವಂಡಿ ಕಟ್ಟಿಮನಿ ಹಿರೇಮಠದ ಶ್ರೀಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಹೂವಿನಹಡಗಲಿ ವಿರಕ್ತಮಠದ ಡಾ. ಹಿರಿಯ ಶಾಂತವೀರ ಸ್ವಾಮೀಜಿ, ಉತ್ತಂಗಿ ವಿರಕ್ತಮಠದ ಶ್ರೀಶಂಕರಲಿಂಗ ಸ್ವಾಮೀಜಿ,ಮಲ್ಲನಕೆರೆ ವಿರಕ್ತಮಠದ ಶ್ರೀ ಚನ್ನಬಸವ ಸ್ವಾಮೀಜಿ, ‘ಜೀವನ ಶಿಕ್ಷಣ’ ಮಾಸಪತ್ರಿಕೆಯ ನಿವೃತ್ತ ಸಂಪಾದಕ ಡಾ.ಗುರುಮೂರ್ತಿ ಯರಗಂಬಳಿಮಠ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಗಣ್ಯರು, ಹಲವಾರು ಸಂಘ-ಸಂಸ್ಥೆಗಳ ಪದಾಧಿಕಾರಿಗಳು ವ್ಯಾಪಕ ಶೋಕ ವ್ಯಕ್ತಪಡಿಸಿದ್ದಾರೆ. ಪತ್ನಿ, 5 ಜನ ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಗಳನ್ನು ಅವರು ಅಗಲಿದ್ದು, ಮೃತರ ಅಂತ್ಯಕ್ರಿಯೆ ಶುಕ್ರವಾರ ಸ್ವಗ್ರಾಮ ಬಾವಿಹಳ್ಳಿ ರುದ್ರಭೂಮಿಯಲ್ಲಿ ಜರುಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.