(ವಿಶ್ವ ಕನ್ನಡಿಗ ನ್ಯೂಸ್) : ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ರೈಲು ಹಳಿ ಬಳಿ ರೀಲ್ ಮಾಡುತ್ತಿದ್ದ ಮೂವರು ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಓರ್ವ ಯುವತಿ ಹಾಗೂ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಮುಸ್ಸೂರಿ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲು ಗರ್ಹಿ ರೈಲ್ವೆ ಗೇಟ್ ಬಳಿ ಈ ಘಟನೆ ನಡೆದಿದೆ. ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಪ್ರಯಾಣಿಕರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ಮೂವರು ರೈಲ್ವೇ ಹಳಿ ಮೇಲೆ ರೀಲ್ ಮಾಡಲು ಯತ್ನಿಸಿರುವುದು ಪತ್ತೆಯಾಗಿದೆ. ಮೂವರು ಹಳಿ ಮೇಲೆ ನಿಂತಿದ್ದಾಗ ಏಕಾಏಕಿ ವೇಗವಾಗಿ ಬಂದ ರೈಲು ಅವರನ್ನು ಡಿಕ್ಕಿ ಹೊಡೆದಿದೆ. ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.