ಹಳೆಯಂಗಡಿ (www.vknews.in) : ರಾಷ್ಟ್ರೀಯ ಹೆದ್ದಾರಿ 66ರ ಪಾವಂಜೆ ಸೇತುವೆಯಲ್ಲಿ ಆಟೋರಿಕ್ಷಾ ಹಠಾತ್ತನೆ ನಿಲ್ಲಿಸಿದ ಪರಿಣಾಮ ಬಸ್ಸು, ಲಾರಿ ಹಾಗೂ ಅಟೋ ರಿಕ್ಷಾ ನಡುವೆ ಸರಣಿ ಅಪಘಾತ ನಡೆದಿದೆ
ಮಂಗಳೂರಿನಿಂದ ಮುಲ್ಕಿ ಬಪ್ಪನಾಡು ದೇವಸ್ಥಾನಕ್ಕೆ ತೆರಳುತ್ತಿದ್ದ ದಂಪತಿಗಳು ಪಾವಂಜೆ ಸೇತುವೆಯಲ್ಲಿ ಚಲಿಸುತ್ತಿದ್ದಂತೆ ತಮ್ಮ ಆಟೋರಿಕ್ಷಾ ಹಠತ್ತನೇ ಕೆಟ್ಟು ನಿಂತ ಪರಿಣಾಮ ಹಿಂದಿನಿಂದ ಬರುತ್ತಿದ್ದ ಬಸ್ಸು ಮತ್ತು ಲಾರಿ ನಿಯಂತ್ರಿಸಲಾಗದೆ ಒಂದಕ್ಕೊಂದು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ
ಅಪಘಾತದಲ್ಲಿ ಆಟೋ ಚಾಲಕನ ಪತ್ನಿ ಸರಸ್ವತಿ ಎಂಬವರ ಸೊಂಟ ಮತ್ತು ಕಾಲಿಗೆ ಪೆಟ್ಟಾಗಿದ್ದು ತಕ್ಷಣ ಸಾಮಾಜಿಕ ಕಾರ್ಯಕರ್ತ ಅದ್ದಿ ಬೊಳ್ಳೂರು ಮತ್ತು ಸ್ಥಳೀಯರು ಅಂಬುಲೆನ್ಸ್ ತರಿಸಿ ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಿದ್ದು ಅಲ್ಲದೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು, ವಾಹನಗಳನ್ನು ಬದಿಗೆ ಸರಿಸಿ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಸುರತ್ಕಲ್ ಉತ್ತರ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡರು
ವರದಿ: ಅದ್ದಿ ಬೊಳ್ಳೂರು
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.