ಸುರತ್ಕಲ್ (ವಿಶ್ವ ಕನ್ನಡಿಗ ನ್ಯೂಸ್) : ಕೃಷ್ಣಾಪುರ 4ನೆ ಬ್ಲಾಕ್ ನೈತಂಗಡಿ ಬಳಿ ಶನಿವಾರ ರಾತ್ರಿ ನಡೆದ ಅಬ್ದುಲ್ ಜಲೀಲ್ ಹತ್ಯೆಯ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಸುರತ್ಕಲ್, ಪಣಂಬೂರು, ಬಜ್ಪೆ, ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರವಿವಾರ (ಡಿ.25) ಬೆಳಗ್ಗೆ 6ರಿಂದ ಡಿ.27ರ ಬೆಳಗ್ಗೆ 6ರವರೆಗೆ ಭಾರತೀಯ ದಂಡ ಪ್ರಕ್ರಿಯೆ ಸಂಹಿತೆಯ ಸೆಕ್ಷನ್ 144ರ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ನಿಷೇಧಾಜ್ಞೆ ಜಾರಿಗೊಳಿಸಲಾಗಿರುವ ಪ್ರದೇಶಗಳಲ್ಲಿ ಇರುವ ಕೈಗಾರಿಕೆಗಳು, ವಾಣಿಜ್ಯ ಸಂಕೀರ್ಣಗಳು ಹಾಗೂ ಕಚೇರಿಗಳ ಕೆಲಸದ ಸಮಯವನ್ನು ಸಂಜೆ 6ಕ್ಕೆ ಬದಲಾಯಿಸಲು ಕ್ರಮ ಕೈಗೊಳ್ಳುವಂತೆ ಹಾಗೂ ರಾತ್ರಿ 6ರ ನಂತರ ಕೆಲಸ ಮಾಡುವ ಸಿಬ್ಬಂದಿಗಳು ಅನಗತ್ಯವಾಗಿ ರಸ್ತೆಗಳಲ್ಲಿ ಅಡ್ಡಾಡದಂತೆ ಸೂಚಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.