ಹೊಸದಿಲ್ಲಿ (ವಿಶ್ವ ಕನ್ನಡಿಗ ನ್ಯೂಸ್) : ಪ್ರತಿಪಕ್ಷಗಳ ಪ್ರಧಾನಿ ಅಭ್ಯರ್ಥಿ ರಾಹುಲ್ ಗಾಂಧಿ ಎಂಬ ಕಮಲ್ ನಾಥ್ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ರಾಹುಲ್ ಗಾಂಧಿ ಅವರನ್ನು ಪ್ರತಿಪಕ್ಷಗಳ ಪ್ರಧಾನಿ ಅಭ್ಯರ್ಥಿಯನ್ನಾಗಿ ಸ್ವೀಕರಿಸಲು ಅಭ್ಯಂತರವಿಲ್ಲ, ಈ ವಿಚಾರದಲ್ಲಿ ವಿರೋಧ ಪಕ್ಷಗಳು ಒಮ್ಮತ ಮೂಡಿಸಬೇಕು ಎಂದು ಹೇಳಿದರು.
ಭಾರತ್ ಜೋಡೋ ಯಾತ್ರೆಯೊಂದಿಗೆ ರಾಹುಲ್ ಈ ಹುದ್ದೆಗೆ ಅರ್ಹರು ಎಂದು ಕಮಲ್ ನಾಥ್ ಹೇಳಿಕೊಂಡಿದ್ದಾರೆ. ಇದೇ ವೇಳೆ ಭಾರತ್ ಜೋಡೋ ಯಾತ್ರೆ ವಿಪಕ್ಷಗಳ ಒಗ್ಗಟ್ಟಿಗೆ ವೇದಿಕೆಯಾಗಲಿ ಎಂದು ರಾಹುಲ್ ಗಾಂಧಿ ಕರೆ ನೀಡಿದರು. ದೇಶದಲ್ಲಿ ಬಿಜೆಪಿ ವಿರುದ್ಧದ ಅಂಡರ್ ಕರೆಂಟ್ ಜೋರಾಗಿದ್ದು, ವಿರೋಧ ಪಕ್ಷಗಳು ಒಂದಾದರೆ ಚುನಾವಣೆಯಲ್ಲಿ ಬಿಜೆಪಿ ನೆಲಕಚ್ಚಲಿದೆ.
ಇದೇ ವೇಳೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಲೇವಡಿ ಮಾಡಿದರು. ‘ಹೊಸ ಭಾರತ’ದ ‘ಹೊಸ ತಂದೆ’ ದೇಶಕ್ಕಾಗಿ ಏನು ಮಾಡಿದ್ದಾರೆ ಎಂದು ವ್ಯಂಗ್ಯವಾಡಿದರು. ಅಮೃತಾ ಫಡ್ನವಿಸ್ ಅವರ ‘ನವ ಭಾರತದ ರಾಷ್ಟ್ರಪಿತ’ ಹೇಳಿಕೆಯನ್ನು ಉಲ್ಲೇಖಿಸಿ ಬಿಹಾರ ಮುಖ್ಯಮಂತ್ರಿ ಹೇಳಿಕೆ ನೀಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.