ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಊರಿಗೆ ರಜೆಯಲ್ಲಿ ಬಂದಿದ್ದ ಬಿಎಸ್ಎಫ್ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ. ನಗರದ ಕುಲಶೇಖರ ಸಮೀಪದ ಉಮಿಕಾನ ನಿವಾಸಿ ಹರೀಶ್ ಕುಮಾರ್(43) ಮೃತಪಟ್ಟ ಬಿಎಸ್ಎಫ್ ಯೋಧರಾಗಿದ್ದಾರೆ.
ಕಳೆದ 21 ವರ್ಷಗಳಿಂದ ಗಡಿ ಭದ್ರತಾ ಪಡೆಯಲ್ಲಿ, 142ನೇ ಬಟಾಲಿಯನ್ ಒಡಿಶಾದಲ್ಲಿ ಕರ್ತವ್ಯದಲ್ಲಿದ್ದ ಅವರು, ರಜೆಯ ಹಿನ್ನೆಲೆಯಲ್ಲಿ ಊರಿಗೆ ಆಗಮಿಸಿದ್ದರು. ಶನಿವಾರ ಅವರಿಗೆ ಹೃದಯಾಘಾತವಾಗಿತ್ತು. ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆ ದಾಖಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ, 6 ವರ್ಷದ ಪುತ್ರ, ಒಂದೂವರೆ ವರ್ಷದ ಪುತ್ರಿ ಮತ್ತು ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.