(www.vknews.in) ಸ್ಟಾರ್ ಶಿಕ್ಷಣ ಸಂಸ್ಥೆಯಲ್ಲಿ ಶನಿವಾರದಂದು ಪ್ರತಿಭಾ ದಿನಾಚರಣೆ ಕಾರ್ಯಕ್ರಮವು ನಡೆಯಿತು ಸಂಸ್ಥೆಯ ನಿರ್ದೇಶಕರಾದ ಮಹಮ್ಮದ್ ಸಲೀಂ ಮಲಾರ್ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಅನಾವರಣಗೊಳಿಸಲು ವೇದಿಕೆ ಕಲ್ಪಿಸಿ ಕೊಡುವುದು ಸಂಸ್ಥೆಯ ಜವಾಬ್ದಾರಿ ಎಂದರು. ಮುಖ್ಯ ಅತಿಥಿಗಳಾಗಿ ಸಾಮಾಜಿಕ ಕಾರ್ಯಕರ್ತ ಗೌರವ ಡಾಕ್ಟರೇಟ್ ಪುರಸ್ಕೃತರು ಮತ್ತು ಡಾ.ಅಬ್ದಲ್ ಕಲಾಂ ರಾಷ್ಟ್ರೀಯ ಪ್ರಶಸ್ತಿ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ಇಸ್ಮಾಯಿಲ್ ಶಾಫಿ ಮಾತಾನಾಡಿ ಇಂದಿನ ವಿದ್ಯಾರ್ಥಿಗಳೇ ಮುಂದಿನ ಭವ್ಯ ಭಾರತದ ಪ್ರಜೆಗಳು ಸಮಾಜ ಸೇವೆಯನ್ನು ತಮ್ಮ ಜೀವನದಲ್ಲಿ ಅಳವಡಿಸಿ ಕೊಂಡಾಗ ಸಿಗುವ ಆನಂದ ಅಪಾರವೆಂದರು .ದೇಶ ಪ್ರೇಮವನ್ನು ಮಕ್ಕಳಿಗೆ ಮನೆಯಿಂದಲೇ ಕಳಿಸುವಂತಾಗ ಬೇಕು ಎಂದು ಮಕ್ಕಳಿಗೆ ಹಿತವಚನವನ್ನು ಹೇಳಿದರು ಪ್ರಾಂಶುಪಾಲರಾದ ಪ್ರಭಾ ನವೀನ್ ವಾರ್ಷಿಕ ವರದಿ ವಾಚಿಸಿದರು. ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿರುವ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಯಿತು. ಸಂಸ್ಥೆಯ ವ್ಯವಸ್ಥಾಪಕರಾದ ಝರೀನ. ಎಸ್.ಎಂ ಮಲಾರ್ ಉಪಸ್ಥಿತರಿದ್ದರು. ವಾಣಿಜ್ಯ ವಿಭಾಗದ ಪ್ರಾಧ್ಯಾಪಕಿ ಮೆಲಿಟಾ ಕ್ರಾಸ್ತಾ ಸ್ವಾಗತಿಸಿದರು. ಕಂಪ್ಯೂಟರ್ ಶಿಕ್ಷಕಿಯಾದ ಕುಮಾರಿ ಪ್ರಜ್ಞಾ ವಂದಿಸಿದರು. ಮೋಹಿನಿ ಎಸ್. ನಿರೂಪಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.