ನವದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ವಿಮಾನದಲ್ಲಿ ಪ್ರಯಾಣಿಕರು ಅನುಚಿತವಾಗಿ ವರ್ತಿಸಿದರೆ ಪರಿಸ್ಥಿತಿಯನ್ನು ನಿಯಂತ್ರಿಸಲು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ವಿಮಾನಯಾನ ಸಂಸ್ಥೆಗಳಿಗೆ ಮಾರ್ಗಸೂಚಿಗಳನ್ನು ಹೊರಡಿಸಿದೆ. ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕನೊಬ್ಬ ಸಹಪ್ರಯಾಣಿಕನ ದೇಹದ ಮೇಲೆ ಮೂತ್ರವಿಸರ್ಜನೆ ಮಾಡಿದ ನಂತರ ಸಚಿವಾಲಯ ಮಧ್ಯಪ್ರವೇಶಿಸಿದೆ.
ದುರ್ವರ್ತನೆ ತೋರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನಾಗರಿಕ ವಿಮಾನಯಾನ ಸಚಿವಾಲಯ ನಿರ್ದೇಶನ ನೀಡಿದೆ. ವಿಮಾನ ಲ್ಯಾಂಡ್ ಆದ ಕೂಡಲೇ ಪ್ರಕರಣ ದಾಖಲಿಸಲು ಕ್ರಮ ಕೈಗೊಳ್ಳಬೇಕು. ಘಟನೆಗಳನ್ನು ಸರಿಯಾಗಿ ವರದಿ ಮಾಡದಿದ್ದರೆ ಮತ್ತು ಕ್ರಮ ಕೈಗೊಳ್ಳದಿದ್ದರೆ ಪೈಲಟ್-ಇನ್-ಕಮಾಂಡ್ ಮತ್ತು ಇತರರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ನಾಗರಿಕ ವಿಮಾನಯಾನ ಸಚಿವಾಲಯ ನಿರ್ದೇಶನ ನೀಡಿದೆ. ವಿಮಾನಯಾನ ಸಂಸ್ಥೆಗಳು ಸೂಚನೆಗಳನ್ನು ಸರಿಯಾಗಿ ಪಾಲಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಡಿಜಿಸಿಎ ಎಚ್ಚರಿಕೆ ನೀಡಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.