ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಬೆಂಗಳೂರಿನ ಕೆ.ಆರ್.ಪುರಂ ಸಮೀಪ ಹೀರಂಡಹಳ್ಳಿಯಲ್ಲಿ ಯುವ ದೇಹದಾರ್ಢ್ಯ ಪಟು ಓರ್ವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೋಲಾರದ ಶ್ರೀನಿವಾಸ ಪುರ ಮೂಲದ ಶ್ರೀನಾಥ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ದೇಹದಾರ್ಢ್ಯಪಟು.
ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ಓದುತ್ತಿದ್ದ ಶ್ರೀನಾಥ್, ಒಟ್ಟಿಗೆ ದೇಹದಾರ್ಢ್ಯ ಸ್ಪರ್ಧೆಗಳಲ್ಲೂ ಭಾಗಿಯಾಗುತ್ತಿದ್ದರು. ಆದರೆ ನಿನ್ನೆ ವಾಸವಿದ್ದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದ್ದು, ಅವರ ಸಾವಿನ ಬಗ್ಗೆ ಪೋಷಕರಿಗೆ ಅನುಮಾನ ಉಂಟಾಗಿದೆ. ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.