ಬೆಳಗಾವಿ (ವಿಶ್ವ ಕನ್ನಡಿಗ ನ್ಯೂಸ್) : ರಾಜ್ಯ ಕಾಂಗ್ರೆಸ್ ನವ ಕರ್ನಾಟಕ ನಿರ್ಮಾಣ ಮಾಡುವ ಸಂಕಲ್ಪದೊಂದಿಗೆ ಹಮ್ಮಿಕೊಂಡಿರುವ “ಪ್ರಜಾ ಧ್ವನಿ” ಬಸ್ ಯಾತ್ರೆಗೆ ಬೆಳಗಾವಿಯ ವೀರಸೌಧದಲ್ಲಿ ಚಾಲನೆ ನೀಡಲಾಯಿತು. ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಜಂಟಿಯಾಗಿ ರಾಷ್ಟ್ರಪಿತ ಮಹಾತ್ಮ ಗಾಂಧಿಯವರಿಗೆ ನಮನ ಸಲ್ಲಿಸುವ ಮೂಲಕ ಯಾತ್ರೆ ಆರಂಭಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಸಲೀಂ ಅಹಮದ್ ಸೇರಿದಂತೆ ಪಕ್ಷದ ಹಲವು ಮುಖಂಡರು, ಕಾರ್ಯಕರ್ತರು ಜೊತೆಗಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.