ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಝಮೀರ್ ಅಹ್ಮದ್ ಖಾನ್ ಜಾತ್ಯತೀತ ಮುಸ್ಲಿಮ್ ನಾಯಕ. ಮುಸ್ಲಿಮರನ್ನು ಪ್ರೀತಿಸಿದಂತೆ ಹಿಂದೂಗಳು ಸೇರಿದಂತೆ ಎಲ್ಲ ಧರ್ಮೀಯರನ್ನು ಪ್ರೀತಿಸುತ್ತಾರೆ. ಈ ಗುಣ ಎಲ್ಲರಲ್ಲೂ ಇರಬೇಕು. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಎಲ್ಲ ಭಾರತೀಯರು ಅಧಿಕಾರಕ್ಕೆ ಬಂದಂತೆ. ನಾನು ಮುಖ್ಯಮಂತ್ರಿಯಾಗಿದ್ದಾಗ ಸಮಾಜದ ಎಲ್ಲ ಬಡವರಿಗೆ, ನ್ಯಾಯ ಕೊಡುವ ಕೆಲಸ ಮಾಡಿದ್ದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಚಾಮರಾಜಪೇಟೆಯ ಶ್ರೀ ಜಂಗಮ ಕಲ್ಯಾಣ ಮಂಟಪದಲ್ಲಿ ಶಾಸಕ ಬಿ.ಝೆಡ್.ಝಮೀರ್ ಅಹ್ಮದ್ ಖಾನ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಿಜೆಪಿ, ಜೆಡಿಎಸ್, ಎಂಐಎಂ ಪಕ್ಷದ ಮುಖಂಡರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಅವರು, ಬಿಜೆಪಿ ಒಂದು ಕೋಮುವಾದಿ ಪಕ್ಷ. ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಎಂದು ಹೇಳುತ್ತಾರೆ. ಆದರೆ, ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರಿಗೆ ಬಿಜೆಪಿಯಲ್ಲಿ ಪ್ರಾತಿನಿಧ್ಯವಿಲ್ಲ ಎಂದು ಕಿಡಿಗಾರಿದ್ದಾರೆ.
ರಾಜ್ಯದಲ್ಲಿ ಕಳೆದ ಮೂರು ವರ್ಷಗಳಿಂದ ಬಿಜೆಪಿ ಸರಕಾರ ಮಾಡುತ್ತಿರುವ ಭ್ರಷ್ಟಾಚಾರ ಹಾಗೂ ಸಮಾಜದಲ್ಲಿ ದ್ವೇಷ ಹರಡಲು ಯತ್ನಿಸುತ್ತಿದೆ. ದೇಶದಲ್ಲಿ ಜಾತ್ಯತೀತತೆ ಮತ್ತು ನ್ಯಾಯದ ಆಧಾರದ ಮೇಲೆ ಸರಕಾರವನ್ನು ಬಯಸುವ ಜನರು ಆದಷ್ಟು ಬೇಗ ಬಿಜೆಪಿ ಸರಕಾರವನ್ನು ಅಧಿಕಾರದಿಂದ ಕಿತ್ತೊಗೆಯುತ್ತಾರೆ. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಈಗಿನ ಬಿಜೆಪಿ ಸರಕಾರದಿಂದ ಸ್ಥಗಿತಗೊಂಡಿರುವ ಎಲ್ಲ ಕಲ್ಯಾಣ ಯೋಜನೆಗಳನ್ನು ಪುನಃ ಆರಂಭಿಸಲಾಗುವುದು ಎಂದು ಅವರು ಹೇಳಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.