ಬಾಗಲಕೋಟೆ (ವಿಶ್ವ ಕನ್ನಡಿಗ ನ್ಯೂಸ್) : ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಮಹಿಳೆಯೊರವರು ತನ್ನ ಮೂರು ಹೆಣ್ಣು ಮಕ್ಕಳಿಗೆ ವಿಷವುಣಿಸಿ ನಂತರ ತಾನೂ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ರೇಖಾ ಅರ್ಜುನ್ ಬಂಗಾರಿ (28), ಮಕ್ಕಳಾದ ಸನ್ನಿಧಿ (7), ಸಮೃದ್ಧಿ (5), ಶ್ರೀನಿಧಿ (2) ಮೃತಪಟ್ಟವರು.
ಈ ಹಿಂದೆಯೂ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದ ರೇಖಾ, ಮಾನಸಿಕವಾಗಿ ಬಳಲುತ್ತಿದ್ದರೆನ್ನಲಾಗಿದೆ. ಬುಧವಾರ ಬೆಳಿಗ್ಗೆ ಬಹಳ ಹೊತ್ತಿನಿಂದ ಮನೆಯ ಬಾಗಿಲು ತೆರೆಯದ್ದರಿಂದ ಪಕ್ಕದ ಮನೆಯವರು ಕಿಟಕಿ ಮೂಲಕ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಪಕ್ಕದ ಮನೆಯವರು ಮನೆ ಬಾಗಿಲು ಮುರಿದು ಒಳಗೆ ಹೋದಾಗ 2 ವರ್ಷದ ಮಗು ಶ್ರೀನಿಧಿ ಮಾತ್ರ ಬದುಕಿತ್ತು, ಸ್ಥಳೀಯರು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸಿದೆ ಮಗು ಮೃತಪಟ್ಟಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.