ಚಿಕ್ಕಮಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಕಳಸ ತಾಲೂಕಿನ ಜೋಗಿಕುಂಬ್ರಿ ಗ್ರಾಮದಲ್ಲಿ ಯುವಕನೊಬ್ಬ ಪ್ರೀತಿಸಿ ಕೈಕೂಟ್ಟ ಕಾರಣಕ್ಕೆ ಮನನೊಂದು ಕಾಲೇಜು ವಿದ್ಯಾರ್ಥಿನಿಯೊಬ್ಬಳು ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಕಳಸ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ದೀಪ್ತಿ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದು, ಹಿತೇಶ್ ಎಂಬ ಯುವಕ ಪ್ರೀತಿಸಿ ವಂಚಿಸಿದ ಕಾರಣ ಆಕೆ ಜನವರಿ 10ರಂದು ಕಳೆ ನಾಶಕ ಸೇವಿಸಿದ್ದಳು. ನಂತರ ಆಕೆಯನ್ನು ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ 4 ದಿನಗಳ ಕಾಲ ಸಾವು-ಬದುಕಿನ ಮಧ್ಯೆ ಹೋರಾಡಿದ ದೀಪ್ತಿ ಶನಿವಾರ ಸಂಜೆ ಸಾವನ್ನಪ್ಪಿದ್ದಾಳೆ
ಸಾಯುವ ಮುನ್ನ ಆಕೆ ಬರೆದಿದ್ದ ಡೆತ್ನೋಟ್ನಲ್ಲಿ, ಬಿಜೆಪಿ ಕಾರ್ಯಕರ್ತ ಎನ್ನಲಾದ ಹಿತೇಶ್ ವಿರುದ್ಧ ದೂರು ದಾಖಲಿಸಲು ಕುದುರೆಮುಖ ಪೊಲೀಸರು ಸತಾಯಿಸುತ್ತಿದ್ದರು. ಹುಡುಗಿಯ ನೀಡಿದ ದೂರನ್ನು ಸ್ವೀಕರಿಸದ ಕುದುರೆಮುಖ ಪೊಲೀಸರನ್ನು ಚಿಕ್ಕಮಗಳೂರು ಎಸ್ಪಿ ತರಾಟೆಗೆ ತೆಗೆದುಕೊಂಡಿದ್ದಾರೆ. ಎಸ್ ಪಿ ಸೂಚನೆ ಬಳಿಕ ಹಿತೇಶ್ ವಿರುದ್ಧ ಪೊಲೀಸರು ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.