ಇಂದೋರ್ (ವಿಶ್ವ ಕನ್ನಡಿಗ ನ್ಯೂಸ್) : ವಿಮಾನದಲ್ಲಿ ಪ್ರಯಾಣಿಸುತ್ತಿದ್ದ 60 ವರ್ಷದ ವ್ಯಕ್ತಿಗೆ ಬಾಯಿಯಲ್ಲಿ ರಕ್ತಸ್ರಾವವಾಗಿದ್ದು, ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ. ಮೃತರನ್ನು ಅತುಲ್ ಗುಪ್ತಾ ಎಂದು ಗುರುತಿಸಲಾಗಿದೆ. ಮಥುರಾದಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೊ ವಿಮಾನದಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದೆ.
ಅತುಲ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ನಂತರ ವಿಮಾನವನ್ನು ಇಂದೋರ್ ವಿಮಾನ ನಿಲ್ದಾಣಕ್ಕೆ ತಿರುಗಿಸಲಾಯಿತು. ಅತುಲ್ ಅವರನ್ನು ವಿಮಾನ ನಿಲ್ದಾಣದಿಂದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ. ಅತುಲ್ ಆಸ್ಪತ್ರೆಗೆ ಬರುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು.
ಅತುಲ್ ಅವರಿಗೆ ಈ ಹಿಂದೆ ಹೃದ್ರೋಗ, ಅಧಿಕ ರಕ್ತದೊತ್ತಡ ಮತ್ತು ಮಧುಮೇಹ ಇತ್ತು ಎಂದು ವೈದ್ಯರು ತಿಳಿಸಿದರು ಎಂದು ವಿಮಾನ ನಿಲ್ದಾಣದ ನಿರ್ದೇಶಕ ಪ್ರಬೋಧ್ ಚಂದ್ರ ಶರ್ಮಾ ಹೇಳಿದ್ದಾರೆ. ನೋಯ್ಡಾ ನಿವಾಸಿ ಅತುಲ್ ಅವರ ಶವವನ್ನು ಅವರ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.