ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಚೆನ್ನೈ ವಿಮಾನ ನಿಲ್ದಾಣದಲ್ಲಿ ಕಳೆದ ವರ್ಷದ ಡಿಸೆಂಬರ್ 10 ರಂದು ವಿಮಾನ ಟೇಕಾಫ್ ವೇಳೆ ವಿಮಾನದ ಎಮರ್ಜೆನ್ಸಿ ಡೋರ್ ತೆಗೆದು ವಿಮಾನಯಾನ ನಿಯಮಗಳ ಉಲ್ಲಂಘನೆ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಚೆನ್ನೈನಿಂದ ತಿರುಚಿರಾಪಳ್ಳಿಗೆ ಪ್ರಯಾಣಿಸುತ್ತಿದ್ದ ಇಂಡಿಗೋ ಫ್ಲೈಟ್ ನಲ್ಲಿ ಪ್ರಯಾಣಿಕನೊಬ್ಬ ವಿಮಾನದ ತುರ್ತು ನಿರ್ಗಮನ ದ್ವಾರವನ್ನು ಆಕಸ್ಮಿಕವಾಗಿ ಅನ್ಲಾಕ್ ಮಾಡಿದ್ದರು ಎಂದು ಇಂಡಿಗೋ ಏರ್ಲೈನ್ಸ್ ಪ್ರಕಟಣೆಯನ್ನು ಬಿಡುಗಡೆ ಮಾಡಿದೆ. ಪ್ರತ್ಯಕ್ಷದರ್ಶಿಯೊಬ್ಬರ ಹೇಳಿಕೆ ಇದನ್ನು ದೃಢಪಡಿಸಿದ್ದು, ಸಂಸದರ ನಡವಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.
ಘಟನೆಯ ನಂತರ ಎಲ್ಲಾ ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸಿ ಸುಮಾರು ಎರಡು ಗಂಟೆಗಳ ಕಾಲ ಪರಿಶೀಲನೆ ನಡೆಸಲಾಗಿದ್ದು, ಬಳಿಕ ಸಂಸದರು ಲಿಖಿತ ಪತ್ರ ಬರೆದು ಕ್ಷಮೆಯಾಚಿಸಿದ್ದಾರೆ ಎಂದು ವರದಿ ಹೇಳಿದೆ.
ಚೆನ್ನೈ ವಿಮಾನ ನಿಲ್ದಾಣದ ಅಧಿಕಾರಿಗಳು ಮತ್ತು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಅಧಿಕಾರಿಗಳು ವಿಮಾನದ ತುರ್ತು ನಿರ್ಗಮನ ಬಾಗಿಲನ್ನು ಪ್ರಯಾಣಿಕರೊಬ್ಬರು ತೆರೆದಿದ್ದು ನಿಜ ಎಂದು ದೃಢಪಡಿಸಿದ್ದಾರೆ. ಆದರೆ ಆ ಪ್ರಯಾಣಿಕ ಯಾರು ಎಂಬುವುದನ್ನು ಖಚಿತಪಡಿಸಲು ಅವರು ನಿರಾಕರಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.