ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ವಿಮಾನದ ತುರ್ತು ನಿರ್ಗಮನದ ಬಾಗಿಲು ತೆರೆದಿದ್ದರೆಂಬ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರನ್ನು ”ಎದೆ ಸೀಳಿದರೆ ನಾಲ್ಕಕ್ಷರ ಇಲ್ಲ ಎಂದವರ ತಲೆ ಸೀಳಿದರೆ ನಯಾಪೈಸೆ ಬುದ್ದಿ ಇಲ್ಲದಾಗಿದೆ” ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
ಕರ್ನಾಟಕ ಕಾಂಗ್ರೆಸ್ ಈ ಬಗ್ಗೆ ಟ್ವೀಟ್ ಮಾಡಿದ್ದು, ತೇಜಸ್ವಿ ಸೂರ್ಯನಿಗೆ ವಿಮಾನದ ತುರ್ತು ನಿರ್ಗಮನದ ಬಾಗಿಲು ತೆಗೆಯುವಂತಹ ತುರ್ತು ಏನಿತ್ತು ಎಂದು ಪ್ರಶ್ನಿಸಿದೆ. ಇದರಿಂದ ಅನಾಹುತ ಸಂಭವಿಸಿದ್ದರೆ ಬಲಿಯಾಗುವ ಜೀವಗಳಿಗೆ ಯಾರು ಹೊಣೆಗಾರರಗುತ್ತಿದ್ದರು? ತೇಜಸ್ವಿ ಸೂರ್ಯ ಎಲ್ಲಾ ಕಡೆಯೂ ತನ್ನ ಮಕ್ಕಳಾಟ ಆಡಲು ಹೋಗುವುದೇಕೆ? ಪ್ರಶ್ನಿಸಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.