ಪುತ್ತೂರು (ವಿಶ್ವ ಕನ್ನಡಿಗ ನ್ಯೂಸ್) : ರೈ ಎಸ್ಟೇಟ್ ಮಾಲಕರೂ, ಬಿಜೆಪಿಯ ಜಿಲ್ಲಾ ಕಾರ್ಯಕಾರಿಣಿಯ ಸದಸ್ಯರೂ, ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರೂ ಆದ ಕೋಡಿಂಬಾಡಿ ಅಶೋಕ್ ಕುಮಾರ್ ರೈ ಅವರು ಜ.22ರಂದು ಮಂಗಳೂರಿನಲ್ಲಿ ನಡೆಯುವ ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ.
ನೆಹರೂ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾಗಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿರುವ ಮಾಜಿ ರಾಜ್ಯಸಭಾ ಸದಸ್ಯ ಬಿ.ಕೆ. ಹರಿಪ್ರಸಾದ್ ಸೇರಿದಂತೆ ರಾಜ್ಯ ಮತ್ತು ರಾಷ್ಟ್ರಮಟ್ಟದ ಹಲವು ನಾಯಕರ ಸಮ್ಮುಖದಲ್ಲಿ ಅಶೋಕ್ ಕುಮಾರ್ ರೈ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ.
ನೆಹರೂ ಮೈದಾನದಲ್ಲಿ ನಡೆಯುವ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ 50 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಪುತ್ತೂರಿನಿಂದ ಬಸ್, ವಿವಿಧ ವಾಹನ ಸೇರಿದಂತೆ 150ಕ್ಕೂ ಅಧಿಕ ವಾಹನಗಳಲ್ಲಿ ಅಶೋಕ್ ಕುಮಾರ್ ರೈ ಅಭಿಮಾನಿ ಬಳಗದವರು ಕಾಂಗ್ರೆಸ್ ಕಾರ್ಯಕ್ರಮಕ್ಕೆ ತೆರಳಲಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.