ತುಮಕೂರು (ವಿಶ್ವ ಕನ್ನಡಿಗ ನ್ಯೂಸ್) ; 18ರಿಂದ 24 ವರ್ಷದೊಳಗಿನ ಮೂವರು ಸಹೋದರಿಯರು ನೇಣಿಗೆ ಕೊರಳೊಡ್ಡಿ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಬರಕನಹಾಲ್ ತಾಂಡಾದಲ್ಲಿ ನಡೆದಿದೆ. ರಂಜಿತಾ(24), ಬಿಂದು(21) ಚಂದನಾ(18) ಮೃತಪಟ್ಟ ಸಹೋದರಿಯರಾಗಿದ್ದಾರೆ.
ತಂದೆ, ತಾಯಿ, ಅಜ್ಜಿಯನ್ನು ಕಳೆದುಕೊಂಡು ಅನಾಥರಾಗಿದ್ದ ಸಹೋದರಿಯರು ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣವು ಇಡೀ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದೆ. ಮೂರು ಅಮಾಯಕ ಜೀವ ಬಲಿಗೆ ಇಡೀ ಗ್ರಾಮಸ್ಥರು ಕಣ್ಣೀರಾಗಿದ್ದಾರೆ. ಇವರು ಏಕಾಏಕಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು? ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ಸುಮಾರು 9 ದಿನಗಳ ಹಿಂದೆಯೇ ಸಹೋದರಿಯರು ಆತ್ಮಹತ್ಯೆಗೆ ಶರಣಾಗಿದ್ದಾರೆನ್ನಲಾಗಿದೆ. ಜನವರಿ 19ರಂದು ಈ ದುರ್ಘಟನೆ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ..
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.