(www.vknews.in) ನಾಪೋಕ್ಲು : ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ಪ್ರಾಮಾಣಿಕತೆಯೊಂದಿಗೆ ಉತ್ತಮ ಶಿಕ್ಷಣವನ್ನು ಪಡೆದರೆ ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದು ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ ನಿವೃತ ಪ್ರಾಂಶುಪಾಲರಾದ ಡಾ.ಚೌರೀರ ಜಗತ್ ತಿಮಯ್ಯ ಹೇಳಿದರು.
ಸಮೀಪದ ಹೊದವಾಡ ಗ್ರಾಮದ ರಾಫಲ್ಸ್ ಆಂಗ್ಲ ಮಾಧ್ಯಮ ಶಾಲೆ ಮತ್ತು ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಸಿ ಅವರು ಮಾತನಾಡಿದರು.
ಪ್ರತಿಯೊಬ್ಬರಿಗೂ ವಿದ್ಯಾರ್ಥಿ ಜೀವನವೆಂದರೆ ಬಹಳ ಮುಖ್ಯ,ವಿದ್ಯಾರ್ಥಿ ಜೀವನದಿಂದಲೇ ವಿದ್ಯಾರ್ಥಿಗಳು ಶಿಸ್ತು, ಸಂಸ್ಕೃತಿ,ಪ್ರಾಮಾಣಿಕತೆಯನ್ನು ಬೆಳೆಸಿಕೊಳ್ಳಬೇಕು,ಅಲ್ಲದೆ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಂಡು ಸಮಾಜದಲ್ಲಿ ಉನ್ನತ ಸ್ಥಾನ ಪಡೆದು ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದರು.
ಅಥಿತಿಗಳಾಗಿ ಆಗಮಿಸಿದ ಕೊಡಗು ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಬಲ್ಲಮಾವಟಿ ನೇತಾಜಿ ಪ್ರೌಢಶಾಲೆಯ ಶಿಕ್ಷಕ ಮೆಹಬೂಬ್ ಸಾಬ್ ಮಾತನಾಡಿ ಈಗಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಹಾಗೂ ಇನ್ನಿತರ ಸಂಸ್ಥೆಗಳಿಂದ ಶಿಕ್ಷಣಕ್ಕೆ ಎಲ್ಲಾ ರೀತಿಯ ಸೌಲಭ್ಯಗಳು ದೊರೆಯುತ್ತಿದ್ದು ಆದ್ದರಿಂದ ವಿದ್ಯಾರ್ಥಿಗಳು ತಮಗೆ ಇಷ್ಟ ಪಟ್ಟ ಪಠ್ಯವನ್ನು ಆಯ್ಕೆಮಾಡಿ ಉತ್ತಮ ಶ್ರಮದಿಂದ ಶಿಕ್ಷಣ ಪಡೆದು ಜೀವನದಲ್ಲಿ ಉನ್ನತ ಸ್ಥಾನಕ್ಕೇರಲು ಪ್ರಯತ್ನ ಪಡಬೇಕೆಂದು ಸಲಹೆ ನೀಡಿದರು.
ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ ಕೊಡಗು ಜಿಲ್ಲಾ ಆಸ್ಪತ್ರೆಯ ಹಿರಿಯ ವೈದ್ಯರಾದ ಡಾ.ಅಬ್ದುಲ್ ಅಝೀಝ್, ಸಾಮಾಜಿಕ ಕಾರ್ಯಕರ್ತ ಖಾಲಿದ್ ಹಾಕತ್ತೂರು,ಶಾಲೆಯ ಅಧ್ಯಕ್ಷ ಅಬ್ದುಲ್ಲಾ ಪ್ರಾಸ್ತಾ ವಿಕವಾಗಿ ಮಾತನಾಡಿ ಶುಭಕೋರಿದರು.
ಈ ಸಂದರ್ಭ ಶಾಲೆಯಲ್ಲಿ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು, ಹಾಗೂ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಶಿಕ್ಷಕ ಮೆಹಬೂಬ್ ಸಾಬ್ ಅವರನ್ನು ಶಾಲಾ ಆಡಳಿತ ಮಂಡಳಿ ವತಿಯಿಂದ ಶಾಲು ಹೊದಿಸಿ ಫಲತಾಂಬೂಲ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ನಂತರ ವಿದ್ಯಾರ್ಥಿಗಳಿಂದ ನಡೆದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿ ನೆರೆದಿದ್ದ ಜನರ ಗಮನ ಸೆಳೆಯಿತು. ಶಾಲೆಯ ಪ್ರಾಂಶುಪಾಲ ತನ್ವೀರ್ ಶಾಲಾ ವರದಿ ವಾಚಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಅಧ್ಯಕ್ಷ ಅಬ್ದುಲ್ಲಾ ವಹಿಸಿದ್ದರು. ವೇದಿಕೆಯಲ್ಲಿ ಹೊದ್ದೂರು ಗ್ರಾಮ ಪಂಚಾಯಿತಿ ಸದಸ್ಯರಾದ ಎಚ್.ಎ.ಹಂಸ, ಕೆ. ಇ.ಮೊಯ್ದು, ಪ್ರಮುಖರಾದ ಎಂ.ಎ. ಮನ್ಸೂರ್ ಆಲಿ, ಸಾಮಾಜಿಕ ಕಾರ್ಯಕರ್ತ ಖಾಲಿದ್ ಹಾಜಿ, ಪಿಟಿಎ ಕಮಿಟಿಯ ಸದಸ್ಯ ನೌಶಾದ್,ಶಾಲೆಯ ಶಿಕ್ಷಕ ವೃಂದ, ಮಕ್ಕಳ ಪೋಷಕರು ಮತ್ತಿತರರು ಹಾಜರಿದ್ದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸೂಫಿಯ ಸಂಗಡಿಗರು ಪ್ರಾರ್ಥಿಸಿದರು.ವಿದ್ಯಾರ್ಥಿಗಳಾದ ಅಫೀಫ, ಮುಬಶಿರ ನಿರೂಪಿಸಿದರು. ವಿದ್ಯಾರ್ಥಿನಿ ಫಿದಾ ಫಾತಿಮಾ ಸ್ವಾಗತಿಸಿ, ವಿದ್ಯಾರ್ಥಿ ಉಫೈಜ್ ವಂದಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.