ಕಾರವಾರ (ವಿಶ್ವ ಕನ್ನಡಿಗ ನ್ಯೂಸ್) : ತರಗತಿಯಲ್ಲಿ ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಕುಸಿದುಬಿದ್ದು ಉಪನ್ಯಾಸಕಿ ಮೃತಪಟ್ಟ ಘಟನೆ ಕಾರವಾರದಲ್ಲಿ ನಡೆದಿದೆ. ಮೃತ ಉಪನ್ಯಾಸಕಿಯನ್ನು ಅನುಷಾ ಶೆಟ್ಟಿ ಎಂದು ಗುರುತಿಸಲಾಗಿದೆ.
ಕಾರವಾರದ ಸರಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಕಳೆದ 6 ವರ್ಷಗಳಿಂದ ಅತಿಥಿ ಉಪನ್ಯಾಸಕಿಯಾಗಿ ಕರ್ತವ್ಯ ನಿರ್ವಹಿಸುತಿದ್ದ ಅನುಷಾ ಪಾಠ ಮಾಡುತ್ತಿದ್ದಾಗಲೇ ಕುಸಿದು ಬಿದ್ದಿದ್ದರು ಎನ್ನಲಾಗಿದೆ. ತಕ್ಷಣ ಅವರನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತಾದರೂ ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.