ಪುತ್ತೂರು (ವಿಶ್ವ ಕನ್ನಡಿಗ ನ್ಯೂಸ್) : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳಾದ ಶರೀಫ್ ಮತ್ತು ಕೆಎ ಮಸೂದ್ ಸೌದಿ ಅರೇಬಿಯಾದಲ್ಲಿದ್ದಾರೆ ಎಂದು ತಿಳಿದುಬಂದಿದೆ.
ಕೊಲೆ ಪ್ರಕರಣದ ಬಳಿಕ ತಲೆಮರೆಸಿಕೊಂಡಿದ್ದ ಈ ಇಬ್ಬರು ಆರೋಪಿಗಳ ಸುಳಿವು ನೀಡಿದವರಿಗೆ 10 ಲಕ್ಷ ನಗದು ಬಹುಮಾನವನ್ನು ನೀಡುವುದಾಗಿ ಎನ್ಐಎ ಅಧಿಕಾರಿಗಳು ಘೋಷಿಸಿದ್ದರು. ಇದೀಗ ಇಬ್ಬರು ಆರೋಪಿಗಳು ಸೌದಿ ಅರೇಬಿಯಾದಲ್ಲಿದ್ದಾರೆ ಎಂದು ತಿಳಿದುಬಂದಿದ್ದು, ಇಬ್ಬರನ್ನು ಭಾರತಕ್ಕೆ ಕರೆತರುವ ನಿಟ್ಟಿನಲ್ಲಿ ಎನ್ಐಎ ಕಾರ್ಯಾಚರಣೆ ನಡೆದಿದೆ ಎಂದು ತಿಳಿದುಬಂದಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.