ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ನಗರದ ನರ್ಸಿಂಗ್ ವಿದ್ಯಾರ್ಥಿನಿಯರ ಹಾಸ್ಟೆಲ್ ಒಂದರಲ್ಲಿ ರಾತ್ರಿ ಊಟ ಸೇವಿಸಿದ 100 ಕ್ಕೂ ಅಧಿಕ ವಿದ್ಯಾರ್ಥಿನಿಯರು ತೀವ್ರ ಅಸ್ವಸ್ಥಗೊಂಡಿದ್ದು, ಅವರನ್ನು ಕೆಎಂಸಿ, ಸಿಟಿ ಆಸ್ಪತ್ರೆ ಸೇರಿದಂತೆ ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.
ವಿದ್ಯಾರ್ಥಿನಿಯರನ್ನು ದಾಖಲು ಮಾಡಿದ ಸಿಟಿ ಆಸ್ಪತ್ರೆ ಬಳಿ ಭಾರಿ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದು ಮಂಗಳೂರು ಪೊಲೀಸ್ ಕಮಿಷನರ್ ಎನ್ ಶಶಿ ಕುಮಾರ್, ಡಿಸಿಪಿಗಳು ಮತ್ತಿತರ ಹಿರಿಯ ಅಧಿಕಾರಿಗಳು ಸ್ಥಳದಲ್ಲಿದ್ದು ವಿಚಾರಣೆ ನಡೆಸುತ್ತಿದ್ದಾರೆ. ವಿಷಾಹಾರ ಸೇವನೆಯಿಂದ ಈ ರೀತಿ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದ್ದು, ಸಂಪೂರ್ಣ ವಿವರ ಇನ್ನಷ್ಟೇ ತಿಳಿದುಬರಬೇಕಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.