ಬಂಟ್ವಾಳ (ವಿಶ್ವ ಕನ್ನಡಿಗ ನ್ಯೂಸ್) : ವಾರೆಂಟ್ ಜಾರಿಯಾಗಿ 2 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಿತ್ತ ಪಡ್ಪು ಮನೆ ಸಜಿಪನಡು ಗ್ರಾಮದ ಅಫ್ರೀದಿ ಬಂಧಿತ ಆರೋಪಿ.
ಈತ ಬಂಟ್ವಾಳ ಗ್ರಾಮಾಂತರ ಠಾಣೆಯ ಅ ಕ್ರ 05/2020 ಕಲಂ 341,324,504 ನೇದರಲ್ಲಿ ವಾರೆಂಟ್ ಜಾರಿಯಾಗಿ ಸುಮಾರು 2 ವರ್ಷಗಳಿಂದ ನ್ಯಾಯಾಲಯಕ್ಕೂ ಹಾಜರಾಗದೆ ತಲೆ ಮರೆಸಿಕೊಂಡಿದ್ದ. ಆತನನ್ನು ಇಂದು ಬೆಳಿಗ್ಗೆ ದಸ್ತಗಿರಿ ಮಾಡಲಾಗಿದ್ದು, ಬಳಿಕ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.