ದೊಡ್ಡಬಳ್ಳಾಪುರ (ವಿಶ್ವ ಕನ್ನಡಿಗ ನ್ಯೂಸ್) : ಕ್ರಿಕೆಟ್ ಪಂದ್ಯಾಟದ ವೇಳೆ ಚೂರಿ ಇರಿತಕ್ಕೆ ಒಳಗಾಗಿ ಇಬ್ಬರು ಯುವಕರು ಮೃತಪಟ್ಟ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿ ಪ್ರತೀಕ್ ಮತ್ತು ಬಿ.ಇ ಪದವೀಧರ ಡಿ.ಎಸ್. ಭರತ್ಕುಮಾರ್ ಮೃತಪಟ್ಟ ಯುವಕರು.
ಶಿವರಾತ್ರಿ ಅಂಗವಾಗಿ ದೊಡ್ಡಬಳ್ಳಾಪುರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಧೀರಜ್ ಮುನಿರಾಜು ಅವರು ಕ್ರೀಡಾ ಮತ್ತು ಸಾಂಸ್ಕೃತಿಕ ವೇದಿಕೆ ಮೂಲಕ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ಉಂಟಾಗಿ ಈ ದುರ್ಘಟನೆ ನಡೆದಿದೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಇಬ್ಬರನ್ನೂ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.