ವಿಟ್ಲ (ವಿಶ್ವ ಕನ್ನಡಿಗ ನ್ಯೂಸ್) : ರಿಕ್ಷಾ ಚಾಲಕರೋರ್ವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪ ಕನ್ಯಾನದಲ್ಲಿ ನಡೆದಿದೆ. ಆಟೋ ಚಾಲಕ ದಿನೇಶ್ ಬೈರಿಕಟ್ಟೆ (32) ಮೃತಪಟ್ಟವರು.
ದಿನೇಶ್ ಅವಿವಾಹಿತರಾಗಿದ್ದು, ಆಟೋ ಚಾಲಕರಾಗಿದ್ದರು. ಅವರು ಇಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿ. ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣಗಳು ಇನ್ನಷ್ಟೇ ತಿಳಿದು ಬರಬೇಕಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.