ಕಾಸರಗೋಡು (ವಿಶ್ವ ಕನ್ನಡಿಗ ನ್ಯೂಸ್) : ತಾಯಿಯ ಎದೆಹಾಲು ನವಜಾತ ಶಿಶುವಿನ ಗಂಟಲಲ್ಲಿ ಸಿಲುಕಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಬದಿಯಡ್ಕದಲ್ಲಿ ನಡೆದಿದೆ. ಉಕ್ಕಿನಡ್ಕ ನಿವಾಸಿಗಳಾದ ಅಬ್ದುಲ್ ರಹ್ಮಾನ್-ತಾಹಿರಾ ದಂಪತಿಯ 25 ದಿನದ ಹಸುಗೂಸು ಎದೆಹಾಲು ಗಂಟಲಲ್ಲಿ ಸಿಲುಕಿ ಮೃತಪಟ್ಟಿರುವ ನವಜಾತ ಶಿಶು.
ಗುರುವಾರದಂದು ಮಗುವಿಗೆ ಎದೆ ಹಾಲು ಉಣಿಸುತ್ತಿದ್ದಾಗ ಹಾಲು ಗಂಟಲಲ್ಲಿ ಸಿಲುಕಿಕೊಂಡು ಮಗು ಅಸ್ವಸ್ಥಗೊಂಡಿತು. ಕೂಡಲೇ ಮಗುವನ್ನು ಬದಿಯಡ್ಕ ಸರಕಾರಿ ಆಸ್ಪತ್ರೆಗೂ, ಬಳಿಕ ಕಾಸರಗೋಡು ಜನರಲ್ ಆಸ್ಪತ್ರೆಗೂ ತಲುಪಿಸಿದರೂ ಮಗುವಿನ ಜೀವ ಉಳಿಸಲು ಸಾಧ್ಯವಾಗಲಿಲ್ಲ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.