ಗುವಾಹಟಿ (ವಿಶ್ವ ಕನ್ನಡಿಗ ನ್ಯೂಸ್) : ಸಂದರ್ಶನವೊಂದರಲ್ಲಿ ಮಾತನಾಡಿದ ಮೇಘಾಲಯದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಅರ್ನೆಸ್ಟ್ ಮಾವ್ರಿ ಅವರು ನಾನು ಬಿಜೆಪಿಯಲ್ಲಿದ್ದು ಗೋಮಾಂಸ ತಿನ್ನುತ್ತೇನೆ, ಇದರಿಂದ ನನಗೆ ಯಾವುದೇ ರೀತಿಯ ಸಮಸ್ಯೆ ಆಗಿಲ್ಲ ಎಂದು ಹೇಳಿದ್ದಾರೆ.
ಮೇಘಾಲಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಫೆಬ್ರುವರಿ 27ರಂದು ಸುದ್ದಿ ಸಂಸ್ಥೆಯೊಂದು ನಡೆಸಿರುವ ಸಂದರ್ಶನದಲ್ಲಿ ಮಾತನಾಡಿದ ಅವರು, ನಾನು ಬಿಜೆಪಿಯಲ್ಲಿದ್ದು ಗೋಮಾಂಸ ತಿನ್ನುತ್ತೇನೆ, ಇದರಿಂದ ನನಗೆ ಯಾವುದೇ ರೀತಿಯ ಸಮಸ್ಯೆ ಆಗಿಲ್ಲ. ನಮ್ಮಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಸಲು ನಾವು ಆಸ್ಪದ ಕೊಟ್ಟಿಲ್ಲ ಎಂದು ಹೇಳಿದ್ದಾರೆ.
ಸಂದರ್ಶನದಲ್ಲಿ ಮಾದ್ಯಮದವರು ಮೇಘಾಲಯದಲ್ಲಿ ಶೇಕಡ 90ರಷ್ಟು ಕ್ರೈಸ್ತರು ಇದ್ದು, ಈ ರಾಜ್ಯದಲ್ಲಿ ಜನರು ಗೋಮಾಂಸ ನಿಷೇಧ, CAA ಮತ್ತು ಇತರ ವಿಷಯಗಳಲ್ಲಿ ಬಿಜೆಪಿಯ ಕಠಿಣ ನಿಲುವುಗಳನ್ನು ಒಪ್ಪಿಕೊಳ್ಳಲು ಸಿದ್ಧರಾಗಿದ್ದಾರೆ ಎಂದು ನೀವು ನಂಬುತ್ತೀರಾ ಎಂದು ಕೇಳಿದಾಗ, ಅದಕ್ಕೆ ಉತ್ತರಿಸಿದ ಅವರು, BJP ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು 9 ವರ್ಷಗಳಾಗಿದ್ದು, ಯಾವುದೇ ಚರ್ಚ್ ದಾಳಿಗೆ ಒಳಗಾಗಿರುವುದನ್ನು ನಾವು ನೋಡಿಲ್ಲ. ಇಲ್ಲಿ ಗೋಮಾಂಸ ಸೇವನೆಗೂ ಯಾವುದೇ ನಿರ್ಬಂಧವಿಲ್ಲ. ನಾನೂ ಗೋಮಾಂಸ ತಿನ್ನುತ್ತೇನೆ ಹಾಗು ನಾನು ಬಿಜೆಪಿಯಲ್ಲೇ ಇದ್ದೇನೆ. ಇದರಿಂದ ಯಾವುದೇ ಸಮಸ್ಯೆಯಾಗಿದ್ದನ್ನು ನಾನು ಈವರೆಗೆ ಕಂಡಿಲ್ಲ. ಮೇಘಾಲಯದ ಜನತೆ ಈ ಬಾರಿ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತಾರೆ ಎಂದು ಹೇಳಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.