ಕಡಬ (ವಿಶ್ವ ಕನ್ನಡಿಗ ನ್ಯೂಸ್) : ತಾಲೂಕಿನ ರೆಂಜಿಲಾಡಿ ಗ್ರಾಮದಲ್ಲಿ ಬೆಳಗ್ಗಿನ ಜಾವ ಆನೆ ದಾಳಿಗೆ ಓರ್ವ ಮಹಿಳೆ ಸಹಿತ ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ರಂಜಿತಾ (21) ಹಾಗೂ ರಮೇಶ್ ರೈ ನೈಲ (55) ಮೃತಪಟ್ಟವರು.
ಹಾಲು ಸೊಸೈಟಿ ಉದ್ಯೋಗಿಯಾಗಿರುವ ರಂಜಿತಾ, ಕೆಲಸಕ್ಕೆ ಬೆಳಗ್ಗೆ ಸೊಸೈಟಿಗೆ ತೆರಳುವ ವೇಳೆ ಆಕೆಯ ಮೇಲೆ ಆನೆ ದಾಳಿ ನಡೆಸಿದೆ. ಆಕೆ ಬೊಬ್ಬೆ ಹೊಡೆದ ವೇಳೆ ರಕ್ಷಿಸಲು ಬಂದ ರಮೇಶ್ ಎಂಬವರ ಮೇಲೂ ಆನೆ ದಾಳಿ ನಡೆಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ರಮೇಶ್ ಅವರು ಸ್ಥಳದಲ್ಲೇ ಮೃತಪಟ್ಟರೆ, ರಂಜಿತಾ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.