ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವಿವಿಧ ಮಠಾಧೀಶರಾದ ಸನ್ಯಾಸಿ ಸಾಧುಗಳು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಒತ್ತಾಯಿಸಿದ್ದಾರೆ. ಪಕ್ಷದ ಸಮಾವೇಶದಲ್ಲಿ ಭಾಗವಹಿಸಲು ಉಡುಪಿ ಜಿಲ್ಲೆಗೆ ಆಗಮಿಸಿದ್ದ ನಡ್ಡಾ ಅವರನ್ನು ಭೇಟಿ ಮಾಡಿದ ಸ್ವಾಮೀಜಿಗಳು ಈ ನಿಟ್ಟಿನಲ್ಲಿ ಮನವಿ ಪತ್ರವನ್ನು ಸಲ್ಲಿಸಿದರು.
ರಾಷ್ಟ್ರೀಯ ಶಿಕ್ಷಣ ನೀತಿಯ ಆದ್ಯತೆ ಅನುಷ್ಠಾನ, ತುಳು ಭಾಷೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವುದು, ದೇವಾಲಯಗಳ ಭೂಮಿ ಅತಿಕ್ರಮಣವನ್ನು ತಡೆಯುವುದು, ಲವ್ ಜಿಹಾದ್ ಬಗ್ಗೆ ಎನ್ಐಎ ತನಿಖೆ ಮತ್ತು ಗೋ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಬೇಡಿಕೆಗಳಲ್ಲಿ ಸೇರಿವೆ.
ನಡ್ಡಾ ಅವರೊಂದಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಇಂಧನ ಸಚಿವ ಸುನೀಲ್ ಕುಮಾರ್, ಶಾಸಕ ರಘುಪತಿ ಭಟ್ ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.