ನವದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ಬಿಹಾರದ ವಲಸೆ ಕಾರ್ಮಿಕರನ್ನು ತಮಿಳುನಾಡಿನಲ್ಲಿ ಕೊಲ್ಲಲಾಗಿದೆ ಎಂದು ಸುಳ್ಳು ಪ್ರಚಾರ ಮಾಡಿದ ಬಿಜೆಪಿ ನಾಯಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉತ್ತರ ಪ್ರದೇಶದ ಬಿಜೆಪಿ ವಕ್ತಾರ ಪ್ರಶಾಂತ್ ಉಮಾರಾವ್ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ವದಂತಿಗಳನ್ನು ಹರಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.
ಹಿಂದಿ ಮಾತನಾಡಿದಕ್ಕಾಗಿ ಬಿಹಾರದ 12 ವಲಸೆ ಕಾರ್ಮಿಕರನ್ನು ತಮಿಳುನಾಡಿನಲ್ಲಿ ಕೊಳ್ಳಲಾಗಿದೆ ಎಂದು ಉಮಾರಾವ್ ಟ್ವೀಟ್ ಮಾಡಿದ್ದಾರೆ. ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರೊಂದಿಗಿನ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. ವಲಸಿಗರ ಮೇಲೆ ದಾಳಿಗಳು ನಡೆಯುತ್ತಿರುವಾಗಲೂ ಬಿಹಾರ ನಾಯಕ ಸ್ಟಾಲಿನ್ ಅವರ ಹುಟ್ಟುಹಬ್ಬದ ಆಚರಣೆಯಲ್ಲಿ ಭಾಗವಹಿಸುತ್ತಿದ್ದರು ಎಂದು ಅವರು ಟ್ವೀಟ್ ಮಾಡಿದ್ದಾರೆ. ನಂತರ ಅದನ್ನು ಅಳಿಸಲಾಯಿತು. ಭಾಷೆ ಮತ್ತು ಪ್ರದೇಶದ ಹೆಸರಿನಲ್ಲಿ ಜನರ ನಡುವೆ ದ್ವೇಷವನ್ನು ಸೃಷ್ಟಿಸಲು ಪ್ರಯತ್ನಿಸಿದ ಆರೋಪದ ಮೇಲೆ ಉಮಾ ರಾವ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.