ಒಮಾನ್(ವಿಶ್ವಕನ್ನಡಿಗ ನ್ಯೂಸ್): ಕರ್ನಾಟಕ ಕಲ್ಚರಲ್ ಫೌಂಡೇಷನ್ KCF ಒಮಾನ್ ಶಿಕ್ಷಣ ವಿಭಾಗದ ವತಿಯಿಂದ ಪುಣ್ಯ ಬರಾಅತ್ ಸಂದೇಶ ಕಾರ್ಯಕ್ರಮವು KCF ಒಮಾನ್ ಅಧ್ಯಕರಾದ ಜನಾಬ್ ಅಯ್ಯೂಬ್ ಕೋಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಬೌಷರ್ ಝೋನ್ ಅಧ್ಯಕ್ಷರಾದ ಸಲೀಂ ಮಿಸ್ಬಾಹಿ ಕನ್ಯಾನ ಇವರು ಉದ್ಘಾಟಿಸಿದರು .
KCF ಅಂತರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಡಿ.ಪಿ.ಯೂಸುಫ್ ಸಖಾಫಿ ಬೈತಾರ್ ಇವರು ವಿಷಯವನ್ನು ಮಂಡಿಸಿ ಪವಿತ್ರ ದಿನವನ್ನು ಎಲ್ಲರೂ ಸದುಪಯೋಗ ಪಡಿಸಿ ಅವತ್ತಿನ ರಾತ್ರಿಯಲ್ಲಿ ಹೆಚ್ಚಿನ ಸಮಯವನ್ನು ಇಬಾದತ್ ನಲ್ಲಿ ತಲ್ಲೀನರಾಬೇಕೆಂದು ಕರೆ ನೀಡಿದರು. KCF ಒಮಾನ್ ಕೋಶಾಧಿಕಾರಿ ಜನಾಬ್ ಆರಿಫ್ ಕೋಡಿ, ಸಂಘಟನಾ ಅಧ್ಯಕ್ಷ ಉಬೈದುಲ್ಲಾ ಸಖಾಫಿ ಮಿತ್ತೂರು, ಶಿಕ್ಷಣ ವಿಭಾಗದ ಅಧ್ಯಕ್ಷ ಝುಬೈರ್ ಸ ಅದಿ ಪಾಟ್ರಕೋಡಿ, KCF ಅಂತರಾಷ್ಟ್ರೀಯ ಸಮಿತಿಯ ಶಿಕ್ಷಣ ವಿಭಾಗದ ಕಾರ್ಯದರ್ಶಿ ಸಯ್ಯದ್ ಆಬಿದ್ ಅಲ್ ಹೈದ್ರೋಸಿ ಕೊಡಗು, ಸಾಂತ್ವನ ವಿಭಾಗದ ಕಾರ್ಯದರ್ಶಿ ಇಕ್ಬಾಲ್ ಬೊಲ್ಮಾರ್ ಬರ್ಕ, ಇಹ್ಸಾನ್ ವಿಭಾಗದ ಕಾರ್ಯದರ್ಶಿ ಹಂಝ ಹಾಜಿ ಕನ್ನಂಗಾರ್ ಹಾಗೂ KCF IC ಸದಸ್ಯರಾದ ಇಬ್ರಾಹಿಮ್ ಹಾಜಿ ಅತ್ರಾಡಿ ಉಪಸ್ಥಿತರಿದ್ದರು.
KCF ಒಮಾನ್ ಪ್ರಧಾನ ಕಾರ್ಯದರ್ಶಿ ಸಾದಿಕ್ ಹಾಜಿ ಸುಳ್ಯ ಸ್ವಾಗತಿಸಿ ಶಿಕ್ಷಣ ವಿಭಾಗದ ಕಾರ್ಯದರ್ಶಿ ನವಾಝ್ ಮಣಿಪುರ ವಂದಿಸಿದರು. KCF ಒಮಾನ್ ಇಹ್ಸಾನ್ ಒರ್ಗನೈಝರ್ ಕಲಂದರ್ ಬಾವ ಪರಪ್ಪು ಕಾರ್ಯಕ್ರಮ ನಿರೂಪಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.