ಚಿಕ್ಕಮಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಕಾಲೇಜಿನ ಹಾಸ್ಟೆಲ್ನಲ್ಲೇ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ಪೋಷಕರು ಇದೀಗ ಹಲವು ಸಂಶಯವನ್ನು ವ್ಯಕ್ತಪಡಿಸಿದ್ದಾರೆ.
ಹಾಸ್ಟೆಲ್ನ ಕಿಟಕಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ದ್ವಿತೀಯ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ಕಿಶೋರ್ ಮೃತದೇಹ ಪತ್ತೆಯಾಗಿತ್ತು. ಕೊಠಡಿಯಿಂದ ಕೊಳೆತ ವಾಸನೆ ಬಂದ ಹಿನ್ನೆಲೆ ಪರಿಶೀಲಿಸಿದಾಗ ಘಟನೆ ಬಹಿರಂಗವಾಗಿತ್ತು. ಕಿಶೋರ್ ತಂದೆ ಈಶ ಆಟೋ ಚಾಲಕರಾಗಿದ್ದು, ಬಡತನದ ಮಧ್ಯೆಯೂ ಮಗನಿಗೆ ಎಂಜಿನಿಯರಿಂಗ್ ಕಲಿಸಲು ಮುಂದಾಗಿದ್ದರು. ಕಿಶೋರ್ ಎಸೆಸೆಲ್ಸಿಯಲ್ಲಿ ಉತ್ತಮ ಅಂಕಗಳಿಸಿದ್ದ. ಇದೀಗ ಮಗನ ಸಾವಿನಿಂದ ಕುಟುಂಬ ಆಘಾತಕ್ಕೆ ಒಳಗಾಗಿದೆ.
ಕಿಶೋರ್ ತುಂಬಾ ಸಾಲ ಮಾಡಿಕೊಂಡಿದ್ದ, ಸಿಕ್ಕಸಿಕ್ಕವರ ಬಳಿ ಹಣ ಕೇಳುತ್ತಿದ್ದ ಎಂದು ಆತನ ಸ್ನೇಹಿತರು ಹೇಳಿದ್ದಾರೆ. ಕಾಲೇಜು ವಿದ್ಯಾರ್ಥಿಗಳಿಗೆ ಇಷ್ಟೆಲ್ಲಾ ಹಣ ಯಾಕೆ ಬೇಕು? ಕಾಲೇಜಿನಲ್ಲಿ ಬೇರೆ ಚಟುವಟಿಕೆಗಳು ನಡೆಯುತ್ತಿತ್ತಾ ಎಂದು ಪೋಷಕರು ಪ್ರಶ್ನಿಸಿದ್ದಾರೆ. ಕ್ಯಾಂಪಸ್ ಒಳಗೆ ಡ್ರಗ್ಸ್ ದಂಧೆ, ಬಡ್ಡಿ ದಂಧೆ ಇರುವ ಬಗ್ಗೆ ಕುಟುಂಬ ಸಂಶಯ ವ್ಯಕ್ತಪಡಿಸಿದೆ. ಈ ಕುರಿತು ಅಸಲಿಯತ್ತು ಪೊಲೀಸ್ ತನಿಖೆಯಿಂದ ಹೊರ ಬರಬೇಕಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.