ಕಾಪು (ವಿಶ್ವ ಕನ್ನಡಿಗ ನ್ಯೂಸ್) : ಖಾಸಗಿ ಎಕ್ಸ್ಪ್ರೆಸ್ ಬಸ್ ಢಿಕ್ಕಿ ಹೊಡೆದು ಶಾಲಾ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕಾಪು ಸಮೀಪ ಇಂದು ಬೆಳಗ್ಗೆ ನಡೆದಿದೆ. ಕಾಪು ಮಹಾದೇವಿ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ವರ್ಷಿತಾ ಶೇರ್ವೆಗಾರ ಮೃತಪಟ್ಟ ವಿದ್ಯಾರ್ಥಿನಿ.
ಬೆಳಗ್ಗೆ ಶಾಲೆಗೆ ಬರುತ್ತಿದ್ದ ಆಕೆ ರಾಷ್ಟ್ರೀಯ ಹೆದ್ದಾರಿ 66ರ ಮಂದಾರ ಹೊಟೇಲ್ ಬಳಿ ರಸ್ತೆ ದಾಟಲು ನಿಂತಿದ್ದ ವೇಳೆ ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಎಕ್ಸ್ಪ್ರೆಸ್ ಬಸ್ ಢಿಕ್ಕಿ ಹೊಡೆದಿದೆ. ಬಾಲಕಿಯ ತಲೆಗೆ ಗಂಭೀರ ಏಟಾಗಿದ್ದು, ಆಕೆಯನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಅಲ್ಲಿ ಆಕೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟದ್ದಾಳೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.