ನವದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಮಾರ್ಫಿಂಗ್ ವೀಡಿಯೊವನ್ನು ಪ್ರಸಾರ ಮಾಡಿದ ಆರೋಪದ ಮೇಲೆ ಬಿಹಾರ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ. ಲಖಿಸರಾಯ್ ನಿವಾಸಿ ಬಿಪಿನ್ ಕುಮಾರ್ ಸಿಂಗ್ ಎಂಬಾತನನ್ನು ರಾಜಸ್ಥಾನ ಪೊಲೀಸರು ಬಂಧಿಸಿದ್ದಾರೆ.
ರಾಜಸ್ಥಾನದ ನಿವಾಸಿ ಲತಾ ಶರ್ಮಾ ಎಂಬವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಪೊಲೀಸರ ಪ್ರಕಾರ, ಟ್ವಿಟ್ಟರ್ನಲ್ಲಿ ಪ್ರಸಾರವಾದ ವೀಡಿಯೊವನ್ನು ಟ್ವಿಟರ್ ತೆಗೆದುಹಾಕಿದೆ. ಆರೋಪಿಯನ್ನು ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಜೈಲಿಗೆ ಸ್ಥಳಾಂತರಿಸಲಾಗಿದೆ. ಅಮಿತ್ ಕುಮಾರ್ ಅವರನ್ನು ಮಾರ್ಚ್ 14 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ಪ್ರತಾಪ್ಗಢ ಎಸ್ಪಿ ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.