ತಲಶ್ಶೇರಿ (ವಿಶ್ವ ಕನ್ನಡಿಗ ನ್ಯೂಸ್) : ಮಟ್ಟನ್ನೂರು ಉಳಿ ಸೇತುವೆ ಬಳಿ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರು ತಲಶ್ಶೇರಿ ಪಿಲಾಕೂಲ್ ನಿವಾಸಿಗಳು. ಘಟನೆ ಸಂಬಂಧ ಲಾರಿ ಚಾಲಕನ ವಿರುದ್ಧ ಮಟ್ಟನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಬ್ದುರ್ ರವೂಫ್ ಮತ್ತು ರಹೀಮ್ ಮೃತರು. ಅಪಘಾತ ಸಂಭವಿಸಿದ ತಕ್ಷಣ ಇಬ್ಬರನ್ನೂ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಪ್ರಾಣ ಉಳಿಸಲಾಗಲಿಲ್ಲ. ಪೊಲೀಸರು ಹಾಗೂ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿದರು. ಮೃತದೇಹವನ್ನು ತಲಶ್ಶೇರಿ ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.