ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಹೆತ್ತವರು ನಗರದ ಸ್ಟೇಟ್ ಬ್ಯಾಂಕ್ ಸಮೀಪದ ಸರ್ವೀಸ್ ಬಸ್ ನಿಲ್ದಾಣದಲ್ಲಿ ಬಿಟ್ಟು ಹೋಗಿದ್ದ ತೀವ್ರ ಅಸ್ವಸ್ಥ ಸ್ಥಿತಿಯಲ್ಲಿ ಇದ್ದ ಗಂಡು ಮಗು ಚಿಕಿತ್ಸೆ ಫಲಕಾರಿಯಾಗದೆ ಮಾ.14 ರಂದು ಮೃತಪಟ್ಟ ಘಟನೆ ನಡೆದಿದೆ. ಸರ್ವೀಸ್ ಬಸ್ ನಿಲ್ದಾಣದ ಹೈಮಾಸ್ಟ್ ದೀಪದ ಕಟ್ಟೆಯಲ್ಲಿ ಫೆ.16 ರಂದು ರಾತ್ರಿ 7 ರ ಹೊತ್ತಿಗೆ ಮಗುವನ್ನು ಬಿಟ್ಟು ಪೋಷಕರು ಹೋಗಿದ್ದರು,
ಶಿಶುವಿಗೆ ತುರ್ತು ಚಿಕಿತ್ಸೆ ಅವಶ್ಯಕತೆ ಇದ್ದುದರಿಂದ ವೆನ್ಲಾಕ್ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು. ಇದುವರೆಗೆ ತಂದೆ ತಾಯಿ ನೋಡಲು ಬಂದಿಲ್ಲ. ಅವರ ಮಾಹಿತಿ ಇದ್ದಲ್ಲಿ ತಿಳಿಸುವಂತೆ ಪಾಂಡೇಶ್ವರ ಠಾಣೆ ಪೊಲೀಸರು ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.