ಪುತ್ತೂರು (ವಿಶ್ವ ಕನ್ನಡಿಗ ನ್ಯೂಸ್) : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವನನ್ನು ಬಂಧಿಸಿ, ಆತನಲ್ಲಿದ್ದ ಗಾಂಜಾ ಹಾಗೂ ಕಾರನ್ನು ವಶಪಡಿಸಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪ ಒಳಮೊಗ್ರು ಗ್ರಾಮದ ಪರ್ಪುಂಜ ಎಂಬಲ್ಲಿ ಸಂಭವಿಸಿದೆ. ಪಾಣಾಜೆ ಗ್ರಾಮದ ಬಲ್ನಾಡು ನಿವಾಸಿ ಅಬೂಬಕ್ಕರ್ ಸಿದ್ದಿಕ್ (35) ಬಂಧಿತ ಆರೋಪಿ.
ಕಾರಿನಲ್ಲಿ ಅಕ್ರಮವಾಗಿ ಗ್ರಾಹಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಅಬೂಬಕ್ಕರ್ ಸಿದ್ದಿಕ್ ಎಂಬಾತನನ್ನು ಪತ್ತೆ ಹಚ್ಚಿದ ಪೊಲೀಸರು ಆತನಲ್ಲಿದ್ದ ಸುಮಾರು 27 ಸಾವಿರ ಮೌಲ್ಯದ 670 ಗ್ರಾಂ ಗಾಂಜಾ ಮತ್ತು ಸುಮಾರು 70 ಸಾವಿರ ಮೌಲ್ಯದ ಕಾರನ್ನು ವಶ ಪಡಿಸಿಕೊಂಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.