ಮದರಿಪುರ (ವಿಶ್ವ ಕನ್ನಡಿಗ ನ್ಯೂಸ್) ; ಬಾಂಗ್ಲಾದೇಶದಲ್ಲಿ ರಸ್ತೆ ಬದಿಯ ಬಸ್ ಸುಮಾರು 30 ಅಡಿ ಆಳಕ್ಕೆ ಬಿದ್ದ ಪರಿಣಾಮ 19 ಮಂದಿ ಮೃತಪಟ್ಟು, ಸುಮಾರು 25 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಭಾನುವಾರ ಬೆಳಗ್ಗೆ ಶಿಬ್ಚಾರ್ ಜಿಲ್ಲೆಯ ದಕ್ಷಿಣ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದೆ. ಅಪಘಾತ ಸಂಭವಿಸಿದ ನಗರವು ಢಾಕಾದಿಂದ 80 ಕಿಮೀ ದೂರದಲ್ಲಿದೆ.
ಇತ್ತೀಚೆಗಷ್ಟೇ ಪೂರ್ಣಗೊಂಡ ಎಕ್ಸ್ ಪ್ರೆಸ್ ಹೈವೇಯ ಕೈಕಂಬ ಮುರಿದು ಬಸ್ 30 ಅಡಿ ಆಳಕ್ಕೆ ಬಿದ್ದಿತ್ತು. ಅಪಘಾತದ ವೇಳೆ ಬಸ್ನಲ್ಲಿ ಸುಮಾರು 40 ಮಂದಿ ಪ್ರಯಾಣಿಕರಿದ್ದರು. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಅಪಘಾತದಲ್ಲಿ ಗಾಯಗೊಂಡ 12 ಜನರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಗಳು ತಿಳಿಸಿವೆ.
ತೀವ್ರವಾಗಿ ಗಾಯಗೊಂಡವರನ್ನು ಢಾಕಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಳೆಯ ಮತ್ತು ಕಳಪೆ ನಿರ್ವಹಣೆಯ ವಾಹನಗಳು ಮತ್ತು ರಸ್ತೆಗಳ ಕಳಪೆ ಸ್ಥಿತಿಯಿಂದಾಗಿ ಬಾಂಗ್ಲಾದೇಶದಲ್ಲಿ ರಸ್ತೆ ಅಪಘಾತಗಳು ಸಾಮಾನ್ಯವಾಗಿದೆ ಎಂದು ವರದಿಗಳು ಸೂಚಿಸುತ್ತವೆ. ಚಾಲಕರ ನಿರ್ಲಕ್ಷ್ಯವೂ ಅಪಘಾತಕ್ಕೆ ಕಾರಣವಾಗುತ್ತದೆ ಎಂದು ವರದಿಗಳು ಹೇಳುತ್ತವೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.