ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಗಗನಸಖಿಯಾಗಿ ಕೆಲಸ ಮಾಡುತ್ತಿದ್ದ ಹಿಮಾಚಲ ಪ್ರದೇಶದ ಅರ್ಚನಾ ಧೀಮನ್ (28) ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್. ಪೊಲೀಸರ ಪ್ರಕಾರ, ಆಕೆಯ ಗೆಳೆಯ ಬೆಂಗಳೂರಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿರುವ ಆದೇಶ್ ಅರ್ಚನಾಳನ್ನು ಅಪಾರ್ಟ್ಮೆಂಟ್ನ ನಾಲ್ಕನೇ ಮಹಡಿಯಿಂದ ತಳ್ಳಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.
ಮಾರ್ಚ್ 11ರಂದು ಬೆಳಗ್ಗೆ ಆದೇಶ್ ವಾಸವಿರುವ ಕೋರಮಂಗಲದ ರೇಣುಕಾ ರೆಸಿಡೆನ್ಸಿ ಅಪಾರ್ಟ್ಮೆಂಟ್ನ 4ನೇ ಮಹಡಿಯಿಂದ ಬಿದ್ದು ಅರ್ಚನಾ ಶವವಾಗಿ ಪತ್ತೆಯಾಗಿದ್ದರು. ಮೊದಲಿಗೆ ಇದು ಆತ್ಮಹತ್ಯೆ ಎಂದು ಶಂಕಿಸಲಾಗಿತ್ತು, ಆದರೆ ಸಾವು ಅನುಮಾನಾಸ್ಪದವಾದ ನಂತರ, ಪೊಲೀಸರು ಆದೇಶ್ ನನ್ನ ವಶಕ್ಕೆ ತೆಗೆದುಕೊಂಡರು. ಮಗಳ ಸಾವು ಕೊಲೆ ಎಂದು ಅರ್ಚನಾ ಪೋಷಕರು ನೀಡಿದ ದೂರಿನ ಮೇರೆಗೆ ಕೋರಮಂಗಲ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ಆದೇಶ್ ನನ್ನು ಬಂಧಿಸಿದ್ದಾರೆ.
ಆದೇಶ್ನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಆತ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮದುವೆಗೆ ಒಪ್ಪದಿದ್ದಲ್ಲಿ ಅತ್ಯಾಚಾರ ಆರೋಪದಡಿ ಪೊಲೀಸ್ ದೂರು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಅರ್ಚನಾ ಆದೇಶ್ಗೆ ಬೆದರಿಕೆ ಹಾಕಿದ್ದರು. ಇದಾದ ಬಳಿಕ ಅವರ ಸಾವಿನ ದಿನವೂ ಇದೇ ವಿಚಾರವಾಗಿ ಇಬ್ಬರ ನಡುವೆ ಜಗಳವಾಗಿತ್ತು. ಇದರಿಂದಾಗಿ ಆಕೆಯನ್ನು ಬಾಲ್ಕನಿಯಿಂದ ತಳ್ಳಿ ಕೊಂದಿದ್ದಾನೆ ಎಂದು ಆದೇಶ್ ಹೇಳಿದ್ದಾರೆ ಎಂದು ತನಿಖಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು ಮತ್ತು ದುಬೈ ನಡುವೆ ಕಾರ್ಯಾಚರಿಸುತ್ತಿರುವ ಅಂತರಾಷ್ಟ್ರೀಯ ವಿಮಾನಯಾನ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಅರ್ಚನಾ, ಘಟನೆ ನಡೆಯುವ ನಾಲ್ಕು ದಿನಗಳ ಮೊದಲು ಆದೇಶ್ ಅವರನ್ನು ಭೇಟಿಯಾಗಲು ಬೆಂಗಳೂರಿಗೆ ಬಂದಿದ್ದರು. ಪೊಲೀಸರ ಪ್ರಕಾರ ಆದೇಶ್ ಡೇಟಿಂಗ್ ಆಪ್ ಮೂಲಕ ಅರ್ಚನಾ ಅವರನ್ನು ಭೇಟಿಯಾಗಿದ್ದು, ಕಳೆದ ಆರು ತಿಂಗಳಿಂದ ಇಬ್ಬರೂ ಪ್ರೀತಿಸುತ್ತಿದ್ದರು. ಅರ್ಚನಾ ಪ್ರತಿ ಬಾರಿಯೂ ಮದುವೆಯಾಗುವಂತೆ ಹೇಳುತ್ತಿದ್ದಳು ಮತ್ತು ಈ ವಿಚಾರವಾಗಿ ಆಗಾಗ್ಗೆ ಜಗಳವಾಡುತ್ತಿದ್ದಳು ಮತ್ತು ಇದು ಅಂತಿಮವಾಗಿ ಕೊಲೆಗೆ ಕಾರಣವಾಯಿತು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಘಟನೆ ನಡೆದ ದಿನ ಸಮೀಪದಲ್ಲೇ ಇದ್ದ ಸಿಸಿಟಿವಿ ದೃಶ್ಯಾವಳಿಗಳನ್ನೂ ಪೊಲೀಸರು ಸಂಗ್ರಹಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.