ಜೈಪುರ (ವಿಶ್ವ ಕನ್ನಡಿಗ ನ್ಯೂಸ್) ; ವಿವಾಹಿತ ಮಹಿಳೆಯೊಂದಿಗೆ ಪರಾರಿಯಾದ ಯುವಕನ ಮೇಲೆ ಹಲ್ಲೆ ನಡೆಸಲಾಗಿದ್ದು, 22 ವರ್ಷದ ಮಹಿಳೆಯ ತಂದೆ ಮತ್ತು ನಾಲ್ವರು ಸಹೋದರರನ್ನು ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನದ ಅಜ್ಮೀರ್ನಲ್ಲಿ ಆಘಾತಕಾರಿ ಘಟನೆ ನಡೆದಿದೆ. ಹಮೀದ್ ಖಾನ್ ಎಂಬ ಯುವಕ ಹಲ್ಲೆಗೊಳಗಾದವನು.
25 ವರ್ಷದ ಹಮೀದ್ ಖಾನ್ ಜನವರಿಯಲ್ಲಿ 22 ವರ್ಷದ ವಿವಾಹಿತ ಮಹಿಳೆಯೊಂದಿಗೆ ಓಡಿಹೋಗಿದ್ದ. ನಂತರ ಅವರು ಅಜ್ಮೀರ್ನಲ್ಲಿ ವಾಸಿಸಲು ಪ್ರಾರಂಭಿಸಿದರು. ಅವರು ವಾಸಿಸುವ ಸ್ಥಳ ಪತ್ತೆಹಚ್ಚಿ ಮನೆಗೆ ನುಗ್ಗಿದ ಯುವತಿಯ ತಂದೆ ಹಾಗೂ ಸಹೋದರರು ಆಕೆಯನ್ನು ಕಿಡ್ನಾಪ್ ಮಾಡಿದ್ದಾರೆ ಎಂದು ಹಮೀದ್ ಖಾನ್ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ ಎಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೇಳಿದ್ದಾರೆ.
ಆರೋಪಿಗಳು ಕಬ್ಬಿಣದ ರಾಡ್ನಿಂದ ಯುವಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ನಂತರ ಆತನ ಮೂಗನ್ನು ಕತ್ತರಿಸಿದ್ದಾರೆ. ಬಳಿಕ ಆರೋಪಿಗಳು ಅವರನ್ನು ರಸ್ತೆಯಲ್ಲೇ ಬಿಟ್ಟು ಹೋಗಿದ್ದಾರೆ. ನಂತರ ಹಮೀದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಪೊಲೀಸರಿಗೆ ದೂರು ನೀಡಿದ್ದರು. ಆರೋಪಿಗಳು ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.