ಕಣ್ಣೂರು (ವಿಶ್ವ ಕನ್ನಡಿಗ ನ್ಯೂಸ್) : ಬೈಕ್ ನಿಯಂತ್ರಣ ತಪ್ಪಿ 19 ವರ್ಷದ ಯುವಕ ಮೃತಪಟ್ಟ ಘಟನೆ ನಡೆದಿದೆ. ಹಳೆಯಂಗಡಿ ಮಾಟಾಯಿ ವಾಟಿಕಲ್ ನಿವಾಸಿ ನಿಶಾನ್. ಪಯ್ಯನ್ನೂರು ಕುಂಞಿಮಂಗಲಂ ಕಂದಂಕುಲಂಗರ ಮಠುಂಪಾಡಿ ದೇವಸ್ಥಾನದ ಬಳಿ ಬೈಕ್ ನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಪ್ರಯಾಣಿಸುತ್ತಿದ್ದ ವೇಳೆ ಬೈಕ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ವರದಿಯಾಗಿದೆ.
ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯರು ಆತನನ್ನು ಆಸ್ಪತ್ರೆಗೆ ಕರೆದೊಯ್ದರೂ ಆತ ಮೃತಪಟ್ಟಿದ್ದಾನೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗುವುದು. ನಿಶಾನ್ ಪಯ್ಯನ್ನೂರು ಜಿಟೆಕ್ ಕಂಪ್ಯೂಟರ್ ಸೆಂಟರ್ ನ ವಿದ್ಯಾರ್ಥಿ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.