ನವದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ರಾಜ್ಯ ವಿಧಾನಸಭಾ ಚುನಾವಣೆ ವೇಳಾಪಟ್ಟಿ ಪ್ರಕಟಗೊಂಡಿದೆ. ರಾಜ್ಯಾದ್ಯಂತ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ.
ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್, ರಾಜ್ಯ ವಿಧಾನಸಭೆ ಚುನಾವಣೆಯ ವೇಳಾಪಟ್ಟಿ ಪ್ರಕಟಿಸಿ, ಸಂಪೂರ್ಣ ವಿವರ ನೀಡಿದ್ದಾರೆ. ಏಪ್ರಿಲ್ 13ರಂದು ಚುನಾವಣೆಯ ಅಧಿಸೂಚನೆ ಹೊರಡಿಸಲಿದ್ದು, ಅಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಏಪ್ರಿಲ್ 20 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಏಪ್ರಿಲ್ 21ರಂದು ನಾಮಪತ್ರ ಪರಿಶಿಲನೆ ನಡೆಯಲಿದ್ದು, ಏಪ್ರಿಲ್ 24 ನಾಮಪತ್ರ ವಾಪಸ್ ಪಡೆಯಲು ಕಡೆಯ ದಿನ. ಮೇ 15ರಂದು ಚುನಾವಣೆಯ ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.
ರಾಜ್ಯಾದ್ಯಂತ ಒಟ್ಟು 58,282 ಮತಗಟ್ಟೆಗಳನ್ನು ತೆರೆಯಲಾಗಿದೆ. ಅವುಗಳಲ್ಲಿ 12,000 ಮತಗಟ್ಟೆಗಳನ್ನು ಸೂಕ್ಷ್ಮ ಮತಗಟ್ಟೆ ಎಂದು ಪರಿಗಣಿಸಲಾಗಿದೆ. 80 ವರ್ಷ ಮೇಲ್ಪಟ್ಟವರಿಗೆ ಮೊದಲ ಬಾರಿಗೆ ಮನೆಯಿಂದಲೇ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ. ಆದರೆ ಅವರು ಮೊದಲೇ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಏಪ್ರಿಲ್ 1ಕ್ಕೆ 18 ವರ್ಷ ಪೂರ್ಣಗೊಳ್ಳುವವರಿಗೂ ಈ ಬಾರಿ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಈ ಸಲ ಮೊದಲ ಬಾರಿಗೆ 9,17,241 ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ ಎಂದು ರಾಜೀವ್ ಕುಮಾರ್ ತಿಳಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.