ಹೊಸದಿಲ್ಲಿ (ವಿಶ್ವ ಕನ್ನಡಿಗ ನ್ಯೂಸ್) : ಜಾರ್ಖಂಡ್ನ ಜೆಮ್ಶೆಡ್ಪುರದಲ್ಲಿ ರಾಮನವಮಿ ಆಚರಣೆಯ ನಂತರ ಕಲ್ಲು ತೂರಾಟ ಮತ್ತು ದಾಳಿ ಮುಂದುವರಿದಿದೆ. ಹಿಂಸಾಚಾರ ಮುಂದುವರಿದಿದ್ದರಿಂದ ಜೆಮ್ಶೆಡ್ಪುರದಲ್ಲಿ ಕರ್ಫ್ಯೂ ಘೋಷಿಸಲಾಗಿದೆ. ಮೊಬೈಲ್ ಇಂಟರ್ನೆಟ್ ಅನ್ನು ಸಹ ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಕಳೆದ ದಿನ ರಾಮನವಮಿ ಸಂದರ್ಭದಲ್ಲಿ ಎರಡು ಬಣಗಳ ನಡುವೆ ಘರ್ಷಣೆ ಏರ್ಪಟ್ಟಿತ್ತು.
ಶಾಸ್ತ್ರಿನಗರ ಪ್ರದೇಶದಲ್ಲಿ ಗುಂಪೊಂದು ಎರಡು ಅಂಗಡಿಗಳು ಮತ್ತು ಆಟೋರಿಕ್ಷಾಕ್ಕೆ ಬೆಂಕಿ ಹಚ್ಚಿದೆ. ದಾಳಿಕೋರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದರು. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ನಗರ ಪೊಲೀಸ್ ಮುಖ್ಯಸ್ಥ ಪ್ರಭಾತ್ ಕುಮಾರ್ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಘರ್ಷಣೆ ಸಾಧ್ಯತೆ ಹಿನ್ನೆಲೆಯಲ್ಲಿ ಕ್ಷಿಪ್ರ ಕಾರ್ಯಾಚರಣೆ ಪಡೆಯನ್ನು ನಿಯೋಜಿಸಲಾಗಿದೆ ಎಂದು ನಗರ ಪೊಲೀಸರು ಮಾಹಿತಿ ನೀಡಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ.
ಶಾಂತಿಯುತ ವಾತಾವರಣಕ್ಕೆ ಭಂಗ ತರದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಸಮಾಜಘಾತುಕರಿಂದ ಅಪಪ್ರಚಾರ ಮಾಡದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಸುಳ್ಳು ಪ್ರಚಾರವನ್ನು ತಿರಸ್ಕರಿಸಬೇಕು. ಅಂತಹ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಬೇಡಿ ಅಥವಾ ಪ್ರಸಾರ ಮಾಡಬೇಡಿ. ಅಂತ ಮಾಹಿತಿ ಕಂಡುಬಂದಲ್ಲಿ ಪೊಲೀಸರಿಗೆ ಕೂಡಲೇ ಮಾಹಿತಿ ನೀಡುವಂತೆ ತಿಳಿಸಿದ್ದಾರೆ. ದಾಳಿಕೋರರನ್ನು ಶೀಘ್ರವೇ ಹಿಡಿಯಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.