ಪಾಟ್ನಾ (ವಿಶ್ವ ಕನ್ನಡಿಗ ನ್ಯೂಸ್) : ಬಿಹಾರದ ಅರಾರಿಯಾ ಜಿಲ್ಲೆಯ ಫೋರ್ಬೆಸ್ಗಂಜ್ ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿ ಊಟ ಸೇವಿಸಿ ಹಲವಾರು ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.
ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟಕ್ಕೆ ಕಿಚಿಡಿ ಬಡಿಸಿದರು. ಆಗ ವಿದ್ಯಾರ್ಥಿಯೊಬ್ಬನಿಗೆ ತನ್ನ ತಟ್ಟೆಯಲ್ಲಿ ಹಾವಿನ ಮರಿ ಸಿಕ್ಕಿತ್ತು ಕೂಡಲೇ ಊಟ ಮಾಡುದನ್ನು ನಿಲ್ಲಿಸಲಾಯಿತು, ಆದರೆ ಹೆಚ್ಚಿನ ಮಕ್ಕಳು ಆಗಲೇ ಊಟ ಮಾಡಿದ್ದರು ಎನ್ನಲಾಗಿದೆ.
ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳಿಗೆ ವಾಂತಿಭೇದಿ ಕಾಣಿಸಿಕೊಂಡ ಕೂಡಲೇ ಅಸ್ವಸ್ಥ ವಿದ್ಯಾರ್ಥಿಗಳನ್ನು ಫೋರ್ಬ್ಸ್ಗಂಜ್ ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ಎಸ್ಡಿಎಂ, ಎಸ್ಡಿಒ, ಡಿಎಸ್ಪಿ ಸೇರಿದಂತೆ ಎಲ್ಲಾ ಉನ್ನತಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಗಳ ಸ್ಥಿತಿಗತಿ ವಿಚಾರಿಸಿದರು. ಅಲ್ಲದೆ, ಘಟನೆಯ ಬಗ್ಗೆ ತನಿಖೆ ನಡೆಸಿ ಸಂಪೂರ್ಣ ವರದಿ ಸಲ್ಲಿಸುವಂತೆ ಶಿಕ್ಷಣ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.