ಬಂಟ್ವಾಳ (www.vknews.in) : ವಿಟ್ಲ ಪೊಲೀಸ್ ಠಾಣೆಯಲ್ಲಿ ಕೆಲಸಕ್ಕೆಂದು ತೆರಳಿದ್ದ ಮಹಿಳೆಯೊರ್ವರು ನಾಪತ್ತೆಯಾಗಿರುವ ಕುರಿತು ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಮಜಿ ನಿವಾಸಿ ಬಾಲಕೃಷ್ಣರವರ ಪುತ್ರಿ ಶ್ರೀದೇವಿ(23) ನಾಪತ್ತೆಯಾದವರು.
ಶ್ರೀದೇವಿ ರವರು ಧರ್ಮಸ್ಥಳ ಗ್ರಾಮಾಭೀವೃದ್ದಿ ಯೋಜನೆ ವಿಟ್ಲ ವಲಯದ ಸೇವಾ ಪ್ರತಿ ನಿಧಿಯಾಗಿ ಕೆಲಸ ಮಾಡಿಕೊಂಡಿದ್ದರು. ಜೂ.9ರಂದು ಮನೆಯಿಂದ ಎಂದಿನಂತೆ ಕೆಲಸಕ್ಕೆ ಹೋಗಿ ಬರುವುದಾಗಿ ವಿಟ್ಲಕ್ಕೆ ಹೋದವರು ಸಾಯಂಕಾಲವಾದರೂ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಈ ವೇಳೆ ಶ್ರೀದೇವಿಯವರ ಮೊಬೈಲ್ ಗೆ ಕರೆ ಮಾಡಿದಾಗ ಮೊಬೈಲ್ ಸ್ವಿಚ್ ಆಫ್ ಆಗಿದೆ. ಆಕೆಯ ಪತ್ತೆಗಾಗಿ ಸಂಬಂಧಿಕರ ಮನೆ ಸಹಿತ ವಿವಿದೆಡೆ ಹುಡುಕಾಟ ನಡೆಸಲಾಗಿತ್ತಾದರೂ ಆಕೆ ಪತ್ತೆಯಾಗಿಲ್ಲ ಎಂದು ಶ್ರೀದೇವಿರವರ ತಂದೆ ಬಾಲಕೃಷ್ಣ ರವರು ವಿಟ್ಲ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.