ಮಂಗಳೂರು (www.vknews.in) : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕೆಲವೇ ಮತಗಳ ಅಂತರದಲ್ಲಿ ಸೋತಿದ್ದರು. ಇಲ್ಲಿ ಬಿಜೆಪಿಯು ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟು ಹೀನಾಯವಾಗಿ ಸೋಲು ಕಂಡಿತ್ತು. ಈ ಸೋಲಿನಿಂದ ಕಂಗೆಟ್ಟಿರುವ ಬಿಜೆಪಿ ನಾಯಕರು ಮುಂದಿನ ಲೋಕಸಭೆ ಚುನಾವಣೆಗೆ ಮುನ್ನವೇ ಈ ಬಿಕ್ಕಟ್ಟು ಶಮನಗೊಳಿಸಲು ತೆರೆಮರೆಯ ಕಸರತ್ತು ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಕೇಂದ್ರ ಸಚಿವರೊಬ್ಬರು ದೆಹಲಿಯಲ್ಲಿ ಅರುಣ್ ಕುಮಾರ್ ಪುತ್ತಿಲ ಜತೆ ಇತ್ತೀಚೆಗೆ ಮಾತುಕತೆ ನಡೆಸಿ, ಕೇಂದ್ರ ವರಿಷ್ಠರ ಗಮನಕ್ಕೆ ತಂದು ಶೀಘ್ರವೇ ಸಮಸ್ಯೆ ಇತ್ಯರ್ಥಪಡಿಸುವ ಭರವಸೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೆ ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸಹ ಅರುಣ್ ಕುಮಾರ್ ಪುತ್ತಿಲ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಪೇಜಾವರ ಶ್ರೀಗಳು ಇತ್ತೀಚೆಗೆ ಪುತ್ತಿಲರ ಮನೆಗೆ ದಿಢೀರ್ ಭೇಟಿ ನೀಡಿ ರಾತ್ರಿ ವಾಸ್ತವ್ಯವನ್ನೂ ಹೂಡಿದ್ದರು. ಈ ವೇಳೆ ಶೀಘ್ರದಲ್ಲಿ ಬಿಕ್ಕಟ್ಟು ಶಮನವಾಗುವ ಬಗ್ಗೆ ಪೇಜಾವರ ಶ್ರೀ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.