ನವದೆಹಲಿ (www.vknews.in) ; ರೈಲು ನಿಲ್ದಾಣದ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ವಿದ್ಯುತ್ ಕಂಬದಿಂದ ಆಘಾತ ಉಂಟಾಗಿ ಯುವತಿಯೋರ್ವರು ಮೃತಪಟ್ಟ ಘಟನೆ ನಡೆದಿದೆ. ಸಾಕ್ಷಿ ಅಹುಜಾ ಎಂಬ ಯುವತಿ ಸಾವನ್ನಪ್ಪಿದ್ದಾಳೆ. ಭಾನುವಾರ ಮುಂಜಾನೆ 5.30ರ ಸುಮಾರಿಗೆ ಈ ಘಟನೆ ನಡೆದಿದೆ.
ನಿಲ್ದಾಣದ ಹೊರಭಾಗದ ನೀರಿನ ಹೊಂಡದ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ವಿದ್ಯುತ್ ಕಂಬದಿಂದ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭೋಪಾಲ್ಗೆ ರೈಲು ಹತ್ತಲು ಸಾಕ್ಷಿ ತನ್ನ ಸಹೋದರಿ ಮತ್ತು ಮೂವರು ಮಕ್ಕಳೊಂದಿಗೆ ನಿಲ್ದಾಣಕ್ಕೆ ಬಂದರು.
ನೀರಿನ ಹೊಂಡದ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ವಿದ್ಯುತ್ ಕಂಬಕ್ಕೆ ತಗುಲಿ ಕೆಳಗೆ ಬಿದ್ದಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಅವರನ್ನು ಆಸ್ಪತ್ರೆಗೆ ಸಾಗಿಸಿದರಾದರೂ ಅವರ ಜೀವ ಉಳಿಸಲು ಸಾಧ್ಯವಾಗಿಲ್ಲ. ಲೈನ್ ನಿಂದ ಇನ್ಸುಲೇಷನ್ ದೋಷದಿಂದ ಕಂಬಕ್ಕೆ ವಿದ್ಯುತ್ ಪ್ರವಹಿಸಿ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.