ಕಡಬ (www.vknews.in) ; ಯುವತಿಯೋರ್ವಳನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣದಲ್ಲಿ ಕಡಬದ ಯುವಕನೋರ್ವನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಕಡಬ ಕೋಡಿಂಬಾಳ ನಿವಾಸಿ ಅನೀಶ್ ರೆಹಮಾನ್ ಬಂಧಿತ ಆರೋಪಿ.
ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಂಗಳೂರಿನ ಯುವತಿಯನ್ನು ಪ್ರೀತಿಸುವುದಾಗಿ ತಿಳಿಸಿ ಆ ಬಳಿಕ ಮದುವೆಯಾಗುವುದಾಗಿ ನಂಬಿಸಿದ್ದಲ್ಲದೆ ಮಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಸುಮಾರು 20 ದಿನಗಳ ಕಾಲ ದೈಹಿಕ ಸಂಪರ್ಕ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ಆರೋಪಿಗೆ ಈ ಮೊದಲೇ ಮದುವೆಯಾಗಿರುವ ವಿಚಾರ ತಡವಾಗಿ ತಿಳಿದುಬಂದ ಹಿನ್ನೆಲೆಯಲ್ಲಿ ತನಗಾಗಿರುವ ತೊಂದರೆಯ ಬಗ್ಗೆ ಮನೆಯವರಲ್ಲಿ ತಿಳಿಸಿದ ಯುವತಿಯು, ಬಳಿಕ ಮಂಗಳೂರಿನ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.
ಯುವತಿಯ ದೂರಿನ ಮೇರೆಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಅ.ಕ್ರ 52/2023 ಕಲಂ 417, 376, 506 ಐಪಿಸಿ ಯಂತೆ ಕೇಸು ದಾಖಲಾಗಿರುತ್ತದೆ. ಆರೋಪಿ ಅನೀಶ್ ರೆಹಮಾನ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಯ ಮೇಲೆ ಕಾವೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 40/2023 ಕಲಂ 27 ಬಿ.ಎನ್.ಡಿ.ಪಿ.ಎಸ್. ಆ್ಯಕ್ಟ್ ನಂತೆ ಕೂಡಾ ಪ್ರಕರಣ ದಾಖಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.